ರಾಜ್ಯದಲ್ಲಿ ಮಳೆಯಾಗುತ್ತಿಲ್ಲ ಎಂದು ಭಯವಾಗುತ್ತಿದೆ: ಸಿಎಂ

ಚಾಮರಾಜನಗರ, ಶುಕ್ರವಾರ, 14 ಜುಲೈ 2017 (19:15 IST)

ರಾಜ್ಯದಲ್ಲಿ ಮಳೆಯಾಗುತ್ತಿಲ್ಲ ಎಂದು ಭಯವಾಗುತ್ತದೆ. ಹೀಗೆ ಮುಂದುವರಿದಲ್ಲಿ ಸಂಕಷ್ಟ ಸ್ಥಿತಿ ಎದುರಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
 
ಜಿಲ್ಲೆಯ ಉಮ್ಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಇತ್ತ ಕಡೆ ರೈತರು ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸುತ್ತಿದ್ದಾರೆ ಎಂದರು.
 
ಕಾವೇರಿ ಕೊಳ್ಳದಲ್ಲಿ ನೀರಿಲ್ಲದಿದ್ದರೇ ಹೇಗೆ ತಾನೇ ನೀರು ಬಿಡಲು ಸಾಧ್ಯ? ಮಳೆ ಬರಲಿ ಎಂದು ವರುಣನಿಗೆ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. ಮೋಡ ಬಿತ್ತನೆಗಾಗಿ ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲಿ ಮೋಡ ಬಿತ್ತನೆ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
 
ರಾಜ್ಯ ಯಾವತ್ತೂ ರೈತರ ಪರವಾಗಿದ್ದು, ರೈತರ ಹಿತವನ್ನೇ ಬಯಸುತ್ತದೆ. ಆದ್ದರಿಂದ, ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಎರಡೆಲೆ ಚಿಹ್ನೆ ಲಂಚ ಪ್ರಕರಣ: ಟಿಟಿವಿ ದಿನಕರನ್ ವಿರುದ್ಧ ಚಾರ್ಜ್‌ಶೀಟ್ ದಾಖಲು

ನವದೆಹಲಿ: ಕೇಂದ್ರ ಚುನಾವಣೆ ಆಯೋಗದೊಂದಿಗೆ ಎರಡೆಲೆ ಚಿಹ್ನೆ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ...

news

ಅನೈತಿಕ ಸಂಬಂಧ: ವಿವಾಹಿತ ಪುತ್ರಿಯನ್ನು ಕತ್ತು ಹಿಸುಕಿ ಕೊಂದ ತಂದೆ

ಜೈಪುರ್: ಶಂಕಿತ ಮರ್ಯಾದೆ ಹತ್ಯೆ ಪ್ರಕರಣವೊಂದರಲ್ಲಿ, ಕಳೆದ ವರ್ಷ ಪತಿಯನ್ನು ತೊರೆದು ಮತ್ತೊಬ್ಬ ...

news

ಕಾಶ್ಮೀರದಲ್ಲಿ ಉಗ್ರರಿಂದ ಕ್ರಿಕೆಟ್ ಆಟ: ಎಕೆ 47 ಆಯ್ತು ವಿಕೆಟ್

ಕಣಿವೆ ರಾಜ್ಯ ದಕ್ಷಿಣ ಕಾಶ್ಮೀರದಲ್ಲಿ ಉಗ್ರರ ಗುಂಪೊಂದು ಟೈಂ ಪಾಸ್ ಗಾಗಿ ಕ್ರಿಕೆಟ್‌ ಆಡುವ ವಿಡಿಯೋವೊಂದು ...

news

ಶಾಲಾ-ಕಾಲೇಜು ವಿದ್ಯಾರ್ಥಿಗಳು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಳ್ಳುವಂತಿಲ್ಲ: ತನ್ವೀರ್ ಸೇಠ್

ಶಾಲಾ-ಕಾಲೇಜು ವಿದ್ಯಾರ್ಥಿಗಳು ಯಾವುದೇ ರೀತಿಯ ಸಂಘಟನೆಯಲ್ಲಿ ಗುರುತಿಸಿಕೊಳ್ಳದಂತೆ ಸುತ್ತೋಲೆ ಹೊರಡಿಸಲು ...

Widgets Magazine