ಪ್ರವಾಹದಿಂದಾದ ಹಾನಿ: ಕೇಂದ್ರಕ್ಕೆ ನೆರವಿಗೆ ಮೊರೆ

ನವದೆಹಲಿ, ಶುಕ್ರವಾರ, 5 ಅಕ್ಟೋಬರ್ 2018 (19:56 IST)

ಮಲೆನಾಡು, ಕೊಡಗು ಸೇರಿದಂತೆ ಇತರ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾದ ಪ್ರವಾಹಕ್ಕೆ ಅಪಾರ ಹಾನಿ ಸಂಭವಿಸಿದೆ. ವಿವಿಧೆಡೆ ಪರಿಹಾರ ಕಾಮಗಾರಿ ಕೈಗೊಳ್ಳಲು ಅಗತ್ಯ ನೆರವು ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ.

ಕೊಡಗು ಹಾಗೂ ಮಲೆನಾಡು ಭಾಗದಲ್ಲಿ ಸುರಿದ ಅಪಾರ ಮಳೆಗೆ 3400 ಕೋಟಿಗೂ ಅಧಿಕ ನಷ್ಟವಾಗಿದೆ. ಜನಜೀವನ ಅಸ್ತವ್ಯವಸ್ತವಾಗಿದೆ. ಹೀಗಾಗಿ ಪರಿಹಾರ ಕಾಮಗಾರಿ ಕೈಗೊಳ್ಳಲು ಅಗತ್ಯ ನೆರವು ನೀಡುವಂತೆ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಚಿವ ಹೆಚ್.ಡಿ.ರೇವಣ್ಣ ಮತ್ತಿತರರು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಕೊಡಗಿನ ವಾಸ್ತವ ಸ್ಥಿತಿಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ. ಕೆಲವೆಡೆ ಬರ ಪರಿಸ್ಥಿತಿ ಇರುವುದನ್ನು ಕೇಂದ್ರದ ಗಮನಕ್ಕೆ ತರಲಾಗಿದೆ. ತುರ್ತು ನೆರವು ನೀಡುವಂತೆ ಕೋರಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿದ್ದರಾಮಯ್ಯ ಸುತ್ತ ಸಚಿವ ಆಕಾಂಕ್ಷಿಗಳ ಚಿತ್ತ

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಆರಂಭಗೊಂಡಿರುವಂತೆ ಸಚಿವ ...

news

ಎಂಪಿ ಚುನಾವಣೆ: ಬಿಎಸ್ಪಿಯಿಂದ ಭಂಗವಿಲ್ಲ ಎಂದು ರಾಹುಲ್ ಹೇಳಿದ್ದೇಕೆ?

ಕಾಂಗ್ರೆಸ್ ಜತೆಗೆ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೈತ್ರಿ ಮಾಡಿಕೊಳ್ಳಲು ಮಧ್ಯಪ್ರದೇಶದಲ್ಲಿ ಬಿಎಸ್ಪಿ ...

news

ಹರಿಹರ-ಕೂಡಲ ಸಂಗಮ ಪೀಠ: ಒಂದಾಗಲು ಅಭ್ಯಂತರವಿಲ್ಲ ಎಂದ ಸ್ವಾಮೀಜಿ

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ ಮತ್ತು ಕೂಡಲಸಂಗಮ ಪಂಚಮಸಾಲಿ ಪೀಠ ಒಗ್ಗೂಡುವಿಕೆ ವಿಚಾರದಲ್ಲಿ ...

news

ಕೆಐಡಿಬಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಕೆಐಡಿಬಿ ಅಧಿಕಾರಿಗೆ ಶಾಕ್ ನೀಡಿದ್ದಾರೆ.

Widgets Magazine