ಬಿಜೆಪಿಗೆ ಗುಡ್‌ಬೈ ಹೇಳಿದ ಮಾಜಿ ಸಂಸದ, ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಮೈಸೂರು:, ಶನಿವಾರ, 28 ಅಕ್ಟೋಬರ್ 2017 (12:45 IST)

ಬಿಜೆಪಿ ಪಕ್ಷದ ಹಿರಿಯ ನಾಯಕರ ನಿರ್ಲಕ್ಷ್ಯಧೋರಣೆಯಿಂದ ಬೇಸತ್ತು ಮಾಜಿ ಸಂಸದ ಸಿ.ಎಚ್.ವಿಜಯ್ ಶಂಕರ್ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
  
ಮಾಜಿ ಸಂಸದ ವಿಜಯ್ ಶಂಕರ್ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. 
 
ಮಾಜಿ ಸಂಸದ, ಮಾಜಿ ಸಚಿವ ವಿಜಯ್ ಶಂಕರ್ ಮೈಸೂರು ಲೋಕಸಭೆ ಕ್ಷೇತ್ರದಿಂದ ಎರಡು ಬಾರಿ ಜಯಗಳಿಸಿ ಸಂಸದರಾಗಿದ್ದರು. ಆದರೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲು ಬಿಜೆಪಿ ನಿರಾಕರಿಸಿ, ಹಾಸನದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿತ್ತು. ಚುನಾವಣೆಯಲ್ಲಿ ಎದುರಾಳಿ ದೇವೇಗೌಡರ ಎದುರು ಪರಾಭವಗೊಂಡಿದ್ದರು. 
 
ರಾಜ್ಯ ಬಿಜೆಪಿ ರೈತ ಮೋರ್ಚಾದ ರಾಜ್ಯಾಧ್ಯಕ್ಷರಾಗಿರುವ ವಿಜಯ್ ಶಂಕರ್ ತಮ್ಮ ಕ್ಷೇತ್ರದಲ್ಲಿ ಫ್ರಭಾವಿ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ, ನಿರಂತರವಾಗಿ ಹಿರಿಯ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ ಎಂದು ಅವರ ಬೆಂಬಲಿಗರು ತಿಳಿಸಿದ್ದಾರೆ.
 
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ವದಂತಿಗಳು ಕೇಳಿಬರುತ್ತಿವೆ. ಆದರೆ. ವಿಜಯ್ ಶಂಕರ್ ತಾವು ಯಾವ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಬಗ್ಗೆ ಬಹಿರಂಗ ಹೇಳಿಕೆ ನೀಡಿಲ್ಲ. ವಿಜಯ್ ಶಂಕರ್‌ ಅವರಿಗೆ ಜೆಡಿಎಸ್, ಕಾಂಗ್ರೆಸ್ ಎರಡೂ ಪಕ್ಷಗಳು ಆಹ್ವಾನ ನೀಡಿವೆ ಎನ್ನುವ ವರದಿಗಳು ಹರಡಿವೆ,. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸೆಕ್ಯೂರಿಟಿ ಗಾರ್ಡ್, ಆತನ ಪತ್ನಿ ಮೇಲೆ ಹಲ್ಲೆ ಮಾಡಿದ ಮೇಯರ್…?

ಮಂಗಳೂರು: ಕರಾಟೆ ಚಾಂಪಿಯನ್ ಮಂಗಳೂರು ಮೇಯರ್ ಕವಿತಾ ಸನಿಲ್ ತಾವು ನೆಲೆಸಿರುವ ಅಪಾರ್ಟ್ ಮೆಂಟ್ ನ ...

news

ವಿಚ್ಛೇದಿತ ಪತ್ನಿಯ ಅಶ್ಲೀಲ ಫೋಟೋಗಳನ್ನು ಡೇಟಿಂಗ್‌ ವೆಬ್‌ಸೈಟ್‌ಗೆ ಅಪ್ಲೋಡ್ ಮಾಡಿದ ಪತಿ ಅರೆಸ್ಟ್

ಬೆಂಗಳೂರು: ವಿಚ್ಚೇದಿತ ಪತ್ನಿಯ ಮೇಲೆ ಸೇಡು ತೀರಿಸಿಕೊಳ್ಳಲು ಆಕೆಯ ಫೋಟೋ ಮತ್ತು ಪ್ರೋಫೈಲ್‌ನ್ನು ...

news

ಮೋದಿ ಭೇಟಿಯಿಂದ ಮಂಜುನಾಥನ ದರ್ಶನಕ್ಕೆ ತೊಂದರೆಯಾಗದು: ವೀರೇಂದ್ರ ಹೆಗ್ಗಡೆ

ಮಂಗಳೂರು: ಪ್ರಧಾನಿ ಮೋದಿ ಭೇಟಿ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಮಧ್ಯಾಹ್ನ 2 ...

news

ಎಲ್ಲಾ ಚುನಾವಣೆ ಇಫೆಕ್ಟ್! ಪ್ರಧಾನಿ ಮೋದಿ ಭಾರೀ ಬ್ಯುಸಿ!

ನವದೆಹಲಿ: ತವರು ರಾಜ್ಯದ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಧಾನಿ ಮೋದಿ ಭಾರೀ ಬ್ಯುಸಿಯಾಗಿದ್ದಾರೆ. ...

Widgets Magazine
Widgets Magazine