ತಪ್ಪು ಅರ್ಥೈಸಿಕೊಂಡು ಬೊಬ್ಬೆ ಹೊಡೆಯಬೇಡಿ: ಬಿಜೆಪಿ ನಾಯಕರಿಗೆ ಪರಮೇಶ್ವರ್ ತಾಕೀತು

ಗುಂಡ್ಲುಪೇಟೆ, ಗುರುವಾರ, 6 ಏಪ್ರಿಲ್ 2017 (19:02 IST)

Widgets Magazine

ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಣ ಹಂಚಿಕೆ ಮಾಡಿದ್ದಾರೆ ಎಂದು ತಪ್ಪಾಗಿ ಅರ್ಥೈಸಿಕೊಂಡು ಬೊಬ್ಬೆ ಹೊಡೆಯಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಬಿಜೆಪಿ ನಾಯಕರ ವಿರುದ್ಧ ಗರಂ ಆಗಿದ್ದಾರೆ.
 
ಹೆಬ್ಬಾಳ್ಕರ್ ಹಣ ಹಂಚಿದ್ದಾರೆ ಆರೋಪಿಸುವ ಬಿಜೆಪಿ ನಾಯಕರು ಅವರ ವಿರುದ್ಧ ಆಯೋಗಕ್ಕೆ ದೂರು ನೀಡಲಿ. ಆಯೋಗದ ಮುಂದೆ ಸಮರ್ಥನೆ ಮಾಡಿಕೊಳ್ಳುತ್ತೇವೆ. ಈಗಾಗಲೇ ಹಲವು ದೂರು ನೀಡಿರುವ ಬಿಜೆಪಿ, ಮತ್ತೊಂದು ದೂರು ದಾಖಲಿಸಲಿ ಎಂದು ಸವಾಲ್ ಹಾಕಿದ್ದಾರೆ.
 
ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಕೈಯಲ್ಲಿ ಹಣ ಹಿಡಿದಿರುವ ವಿಡಿಯೋ ಬಹಿರಂಗವಾಗುತ್ತಿದ್ದಂತೆ ಬಿಜೆಪಿ ನಾಯಕರು ನಾ ಮುಂದು ತಾ ಮುಂದು ಎನ್ನುವಂತೆ ಆರೋಪಗಳ ಸುರಿಮಳೆಗೈದಿದ್ದಾರೆ.
 
ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮತ್ತೊರ್ವ ಬಿಜೆಪಿ ನಾಯಕಿ ಭಾರತಿ ಶೆಟ್ಟಿ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ವಿಪಕ್ಷ ನಾಯಕ ಈಶ್ವರಪ್ಪ ವಿರುದ್ಧ ಎಫ್‌ಐಆರ್

ಗುಂಡ್ಲುಪೇಟೆಯಲ್ಲಿ ಭಾರಿ ಪ್ರಮಾಣದಲ್ಲಿ ಹಣ ಹಂಚಲಾಗಿದೆ ಎಂದು ಹೇಳಿರುವುದಕ್ಕೆ ನನ್ನ ವಿರುದ್ಧ ಎಫ್‌ಐಆರ್ ...

news

ಲೋಕಾಯುಕ್ತ ಕಚೇರಿಯಲ್ಲೇ ಲಂಚ....!

ಬೆಂಗಳೂರು: ಭ್ರಷ್ಟರಿಗೆ ಸಿಂಹಸ್ವಪ್ನವಾಗಿದೆ ಎನ್ನಲಾದ ಲೋಕಾಯುಕ್ತ ಕಚೇರಿಯಲ್ಲಿಯೇ ಸಿಬ್ಬಂದಿಯೊಬ್ಬ ...

news

ಹಣ ಹಂಚುತ್ತಿರುವ ಲಕ್ಷ್ಮಿ ಹೆಬ್ಬಾಳ್ಕರ್‌ರನ್ನು ಬಂಧಿಸಿ: ಶೋಬಾ ಕರಂದ್ಲಾಜೆ

ಗುಂಡ್ಲುಪೇಟೆ: ಮತದಾರರಿಗೆ ಹಣ ಹಂಚಿಕೆ ಮಾಡುತ್ತಿರುವ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ...

news

ನಾವ್ಯಾರು ಪ್ರಧಾನಿ ಮೋದಿಗೆ ಸರಿಸಾಟಿಯಲ್ಲ: ದೇವೇಗೌಡ

ನವದೆಹಲಿ: ಕರ್ನಾಟಕ ಸಮುದ್ರದಲ್ಲಿ ಸಣ್ಣ ದ್ವೀಪವಿದ್ದಂತೆ. ನಾವ್ಯಾರು ಪ್ರಧಾನಿ ಮೋದಿಗೆ ಸರಿಸಾಟಿಯಲ್ಲ ಎಂದು ...

Widgets Magazine