ಕೆಪಿಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಸ್.ಎಂ.ಕೃಷ್ಣ ಮೊಮ್ಮಗ ನಿರಂತರ ಗಣೇಶ್

ಚಿಕ್ಕಮಗಳೂರು, ಸೋಮವಾರ, 11 ಫೆಬ್ರವರಿ 2019 (11:16 IST)

ಚಿಕ್ಕಮಗಳೂರು : ಕೆಪಿಸಿಸಿ ವೈದ್ಯರ ಘಟಕದ  ಪ್ರಧಾನ ಕಾರ್ಯದರ್ಶಿ ಡಾ. ನಿರಂತರ ಗಣೇಶ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.


ನಿರಂತರ ಗಣೇಶ್ ಅವರು ಮಾಜಿ ಸಿಎಂ, ಬಿಜೆಪಿ ಮುಖಂಡ ಅವರ ಮೊಮ್ಮಗ, ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಆಪ್ತರೂ ಕೂಡ ಆಗಿದ್ದ ಇವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದರು. ಆದರೆ ಇದೀಗ ಕೆಪಿಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ.


ಅಲ್ಲದೇ ಇತ್ತೀಚೆಗಷ್ಟೇ  ಮಂಡ್ಯ ಜಿಲ್ಲೆಯಲ್ಲಿ ನಡೆದ  ಕಾರ್ಯಕ್ರಮವೊಂದರಲ್ಲಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ತಮ್ಮ ಜತೆ ಕಾಂಗ್ರೆಸ್‌ನಲ್ಲಿದ್ದ ಆಪ್ತರು ಹಾಗೂ ಅಭಿಮಾನಿಗಳು ಬಿಜೆಪಿ ಸೇರುವಂತೆ ಕರೆ ನೀಡಿದ್ದರು. ಈ ಹಿನ್ನಲೆಯಲ್ಲಿ ನಿರಂತರ ಗಣೇಶ್ ಬಿಜೆಪಿ ಸೇರುತ್ತಾರಾ ಎಂಬ ಅನುಮಾನ ಕೂಡ ವ್ಯಕ್ತವಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಬಿಡುಗಡೆ ಮಾಡಿರುವ ಆಡಿಯೋ ನಕಲಿ - ಸಿಎಂ ವಿರುದ್ಧ ದೂರು ದಾಖಲಿಸಿದ ಬಿಎಸ್ ವೈ ಮಾಧ್ಯಮ ಸಲಹೆಗಾರ

ಬೆಂಗಳೂರು : ಅಪರೇಷನ್ ಕಮಲದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ...

news

ಬಿ.ಎಸ್.ವೈ ಕೂಡಲೇ ರಾಜೀನಾಮೆ ನೀಡಬೇಕೆಂದ ಸಿದ್ದರಾಮಯ್ಯ!

ಆಪರೇಷನ್ ಕಮಲ ಕುರಿತ ಆಡಿಯೋದಲ್ಲಿ ಮಾತನಾಡಿದ್ದು ಸಾಬೀತಾದರೆ ರಾಜೀನಾಮೆ ಕೊಡುವೆ ಎಂದಿದ್ದ ಯಡಿಯೂರಪ್ಪ, ...

news

ಇಂದು ಸದನದಲ್ಲಾಗುತ್ತಾ ಸಿಡಿ ಬ್ಲಾಸ್ಟ್?

ಒಂದೆಡೆ ಸರಕಾರದ ವಿರುದ್ಧ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಲು ಮುಂದಾಗಿದ್ದರೆ, ಮತ್ತೊಂದೆಡೆ ಬಿ.ಎಸ್.ವೈ ...

news

ವೇದಿಕೆ ಮೇಲೆ ಬಿಎಸ್ ವೈ ಜೊತೆ ಮಾತನಾಡದೇ ನಿರ್ಗಮಿಸಿದ ಪ್ರಧಾನಿ ಮೋದಿ

ಹುಬ್ಬಳ್ಳಿ : ಧಾರವಾಡ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ಎರಡೂ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ...