Widgets Magazine
Widgets Magazine

ಗೌರಿ ಲಂಕೇಶ್ ಹಂತಕರು ಯಾರು ಎಂದು ತಿಳಿದಿದೆ: ರಾಮಲಿಂಗಾರೆಡ್ಡಿ

ಚಿಕ್ಕಬಳ್ಳಾಪುರ, ಮಂಗಳವಾರ, 31 ಅಕ್ಟೋಬರ್ 2017 (19:35 IST)

Widgets Magazine

ಚಿಕ್ಕಬಳ್ಳಾಪುರ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ತನಿಖೆ ಬಹುತೇಕ ಮುಗಿದಿದ್ದು, ಸದ್ಯದಲ್ಲೇ ಹಂತಕರನ್ನು ಬಂಧಿಸುತ್ತೇವೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.


ಚಿಕ್ಕಬಳ್ಳಾಪುರದಲ್ಲಿ ನಡೆದ ಇಂದಿರಾ ನಮನ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಈ ಹಿಂದೆ ಕೂಡ ಸಾಕಷ್ಟು ಬಾರಿ ಹೇಳಿದ್ದೇನೆ. ತನಿಖೆ ನಡೆದಿದ್ದು, ಹಂತಕರು ಯಾರು ಎಂದು ತಿಳಿದಿದೆ. ಶೀಘ್ರದಲ್ಲೇ ಆರೋಪಿಗಳು ಯಾರು ಎಂದು ಪ್ರಕಟಿಸುತ್ತೇವೆ. 100ಕ್ಕೆ 100ರಷ್ಟು ಹಂತಕರನ್ನು ಬಂಧಿಸುತ್ತೇವೆ. ಆರೋಪಿಗಳ ಬಂಧನಕ್ಕೆ ಇನ್ನೂ ಸ್ವಲ್ಪ ದಿನ ಕಾಯಬೇಕು ಎಂದರು.

ರಾಜ್ಯದ 30 ಜಿಲ್ಲೆಗಳಲ್ಲೂ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಎಲ್ಲಾ ಅಗತ್ಯ ಕ್ರಮಗಳನ್ನ ಕೈಗೊಂಡಿದೆ ಎಂದರು.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಎಸ್‌ವೈ 84 ದಿನಗಳ ಯಾತ್ರೆಗೆ ಚಾಲನೆ ನೀಡಲಿರುವ ಅಮಿತ್ ಶಾ

ಬೆಂಗಳೂರು: ಮುಂದಿನ ವರ್ಷದ ಆರಂಭದಲ್ಲಿ ಕರ್ನಾಟಕದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ...

news

ಪತ್ತೆಯಾಗದ ಎಲ್ಲಾ ಪ್ರಕರಣಗಳು ಇಂಪಾರ್ಟೆಂಟ್: ಡಿಜಿಪಿ ನೀಲಮಣಿ ರಾಜು

ಬೆಂಗಳೂರು: ರಾಜ್ಯದ ನೂತನ ಹಾಗೂ ಮೊದಲ ಮಹಿಳಾ ಪೊಲೀಸ್ ಮಹಾ ನಿರ್ದೇಶಕಿಯಾಗಿ ನೀಲಮಣಿ ಎನ್.ರಾಜು ಅಧಿಕಾರ ...

news

ಅಮೆರಿಕದ ರಸ್ತೆಗಳಿಗಿಂತ ಮಧ್ಯಪ್ರದೇಶ ರಸ್ತೆಗಳು ಉತ್ತಮ: ಉಮಾ ಭಾರತಿ

ನವದೆಹಲಿ: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಹೇಳಿದಂತೆ ಮಧ್ಯಪ್ರದೇಶದ ರಸ್ತೆಗಳು ...

news

ಫೇಸ್ ಬುಕ್ ಗ್ರೂಪ್ ಅಡ್ಮಿನ್ ಗಳಿಗೆ ಸಿಗಲಿದೆ ಹೆಚ್ಚು ಅಧಿಕಾರ

ನವದೆಹಲಿ: ಫೇಸ್ ಬುಕ್ ಗ್ರೂಪ್ ಕ್ರಿಯೇಟ್ ಮಾಡುವ ಅಡ್ಮಿನ್ ಗಳಿಗೆ ಹೆಚ್ಚು ಅಧಿಕಾರ ನೀಡುವ ಫೀಚರ್ ಬಿಡುಗಡೆ ...

Widgets Magazine Widgets Magazine Widgets Magazine