ಗುಂಡ್ಲುಪೇಟೆ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರ ಲಾಠಿಚಾರ್ಜ್

ಗುಂಡ್ಲುಪೇಟೆ, ಸೋಮವಾರ, 20 ಮಾರ್ಚ್ 2017 (13:39 IST)

Widgets Magazine

ಉಪಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಉಭಯ ಪಕ್ಷಗಳು ಕಾರ್ಯಕರ್ತರ ಮಧ್ಯೆ ವಾಗ್ವಾದ ಏರ್ಪಟ್ಟಿದ್ದರಿಂದ ಸ್ಥಳದಲ್ಲಿದ್ದ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ವರದಿಯಾಗಿದೆ.   
 
ಗುಂಡ್ಲುಪೇಟೆ ತಹಶೀಲ್ದಾರ್ ಕಚೇರಿ ಎದುರು ಲಾಠಿ ಚಾರ್ಜ್ ನಡೆದಿದ್ದು, ಪೊಲೀಸರ ಲಾಠಿ ಚಾರ್ಜ್‌ನಿಂದ ಆಕ್ರೋಶಗೊಂಡ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
 
ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಎರಡು ಪಕ್ಷಗಳ ಕಾರ್ಯಕರ್ತರು ಮುಖಾಮುಖಿಯಾಗಿ ವಾಗ್ವಾದದಲ್ಲಿ ತೊಡಗಿದ ನಂತರ ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿರುವುದರಿಂದ ಪೊಲೀಸರು ಲಾಠಿ ಚಾರ್ಜ್ ಮಾಡಿ ಪಕ್ಷದ ಕಾರ್ಯಕರ್ತರನ್ನು ಚದುರಿಸಿದ್ದಾರೆ. 
 
ಪೊಲೀಸರು ಲಾಠಿ ಚಾರ್ಜ್ ನಡೆಸಿದ ನಂತರ ಪರಿಸ್ಥಿತಿ ತಹಬದಿಗೆ ಬಂದಿದ್ದು, ಉಭಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪಾಕಿಸ್ತಾನದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮೌಲ್ವಿಗಳು ಭಾರತಕ್ಕೆ ವಾಪಸ್

ದೆಹಲಿಯ ಹಜರರತ್ ನಿಜಾಮುದ್ದೀನ್ ದರ್ಗಾದ ಮುಖ್ಯಸ್ಥ ಸೇರಿದಂತೆ ಪಾಕಿಸ್ತಾನಕ್ಕೆ ತೆರಳಿ ನಾಪತ್ತೆಯಾಗಿದ್ದ ...

news

ಪತಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ತುಂಬಿದ ಪತ್ನಿ!

ಮೊಹಾಲಿ: ನಾರಿ ಮುನಿದರೆ ಮಾರಿ ಎನ್ನುವುದು ಈ ಪತಿಯ ಪಾಲಿಗೆ ಅಕ್ಷರಶಃ ನಿಜವಾಯಿತು. ಪತ್ನಿಯೇ ಪತಿಯನ್ನು ...

news

ರಾಜ್ಯದಲ್ಲೂ ಬರ, ಸದನದಲ್ಲಿ ಸಚಿವರಿಗೂ ಬರ: ಜೆಡಿಎಸ್ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಬೀಕರ ಬರ ಕಾಡುತ್ತಿದ್ದರೆ ಸದನದಲ್ಲೂ ಸಚಿವರ ಬರ ಕಾಡುತ್ತಿದೆ ಎಂದು ಜೆಡಿಎಸ್ ಶಾಸಕ ...

news

45 ಜನರ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ ಯುವತಿ

ಬೆಂಗಳೂರಿನ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ...

Widgets Magazine Widgets Magazine