ಕಾಂಗ್ರೆಸ್ ಕಳ್ಳರ ಪಕ್ಷ ಶಾಸಕ ರಾಜಣ್ಣ ಹೇಳಿಕೆಗೆ ಆರೋಗ್ಯ ಸಚಿವರ ಸಮರ್ಥನೆ

ಬೆಂಗಳೂರು, ಶುಕ್ರವಾರ, 22 ಸೆಪ್ಟಂಬರ್ 2017 (14:01 IST)

ಕಾಂಗ್ರೆಸ್ ಕಳ್ಳರ ಪಕ್ಷ ಎನ್ವುವ ಶಾಸಕ ಹೇಳಿಕೆಯನ್ನು ಆರೋಗ್ಯ ಸಚಿವ ರಮೇಶ್ ಕುಮಾರ್ ಸಮರ್ಥಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.
ಶಾಸಕ ರಾಜಣ್ಣ, ಕಾಂಗ್ರೆಸ್ ಪಕ್ಷ ಕಳ್ಳರ ಪಕ್ಷವಾಗಿದೆ ಎಂದು ಹೇಳಿಕೆ ನೀಡಿರುವುದು ಸರಿಯಾಗಿದೆ. ಅವರು ಕೆಲವರನ್ನು ಮನಸ್ಸಿನಲ್ಲಿಟ್ಟುಕೊಂಡು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಇಂತಹ ಹೇಳಿಕೆಯನ್ನು ನೀಡಿರುವುದಕ್ಕೆ  ಅವರ ಧೈರ್ಯವನ್ನು ಮೆಚ್ಚುತ್ತೇನೆ ಎಂದು ತಿಳಿಸಿದ್ದಾರೆ.
 
ಕೆಲವೊಂದು ಬಾರಿ ಅವರ ಭಾಷೆ ಹಾಗೇ ಇರುತ್ತದೆ. ಕಾಂಗ್ರೆಸ್ ಪಕ್ಷ ಸರಿಯಿಲ್ಲ ಎನ್ನುವುದು ಅವರ ಅರ್ಥವಲ್ಲ. ನಾನೂ ಸದನದಲ್ಲಿ ನಮ್ಮ ಪಕ್ಷ ವಿರುದ್ಧವೇ ಹಲವಾರು ಬಾರಿ ಮಾತನಾಡಿದ್ದೇನೆ. ರಾಜಕೀಯದಲ್ಲಿ ಯಾರೂ ಯಾವ ಪಕ್ಷವೂ ಪರಿಪೂರ್ಣವಲ್ಲ. ವ್ಯವಸ್ಥೆ ಹಾಳಾಗಿದೆ ಎನ್ನುವುದೇ ಅವರ ಹೇಳಿಕೆ ಎಂದು ಹೇಳಿದ್ದಾರೆ.
 
ಕಾಂಗ್ರೆಸ್ ವಿರುದ್ಧವೇ ಶಾಸಕರ ರಾಜಣ್ಣ ವಾಗ್ದಾಳಿ ನಡೆಸಿರುವುದು, ಅದನ್ನು ಆರೋಗ್ಯ ಸಚಿವ ರಮೇಶ್ ಕುಮಾರ್ ಸಮರ್ಥಿಸಿಕೊಂಡಿರುವುದು ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸೆಕ್ಸ್ ಮಾಡು ಎಂದು ಪೀಡಿಸುತ್ತಿಗೆ ಆಂಟಿಯನ್ನ ಬರ್ಬರವಾಗಿ ಕೊಂದ ಯುವಕ

ಸೆಕ್ಸ್ ಮಾಡು ಎಂದು ಒತ್ತಾಯಿಸುತ್ತಿದ್ದ ಮಾಲಕಿಯನ್ನ ಮನೆಗೆಲಸದ ಯುವಕ ಕೊಂದಿರುವ ಘಟನೆ ನವದೆಹಲಿಯ ಲಜಪತ್ ...

news

ಬಳ್ಳಾರಿಗೆ ಭೇಟಿ ನೀಡಲು ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ

ಬೆಂಗಳೂರು: ಗಣಿನಾಡು ಬಳ್ಳಾರಿಗೆ ಭೇಟಿ ನೀಡಲು ಅಕ್ರಮ ಗಣಿಗಾರಿಕೆ ಹಗರಣದಲ್ಲಿದ್ದ ಮಾಜಿ ಸಚಿವ ಜನಾರ್ದನ ...

news

ಪ್ರಧಾನಿ ಮೋದಿ ಬಾಂಬೆಮಿಠಾಯಿ ಕಥೆ ಹೇಳ್ತಾರೆ: ಸಿಎಂ ಸಿದ್ದರಾಮಯ್ಯ

ಬಳ್ಳಾರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಬಾಂಬೆ ಮಿಠಾಯಿ ಕಥೆ ಹೇಳ್ತಾರೆ. ಅವರದು ಕೇವಲ ಬೂಟಾಟಿಕೆ ಅದರ ...

news

ಡಿನೋಟಿಫೈ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ: ಬಿಎಸ್‌ವೈಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಶಿನರಾಮ್ ಕಾರಂತ ಬಡಾವಣೆ ಜಮೀನು ಕೈ ಬಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ...

Widgets Magazine
Widgets Magazine