ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ದೂರು ದಾಖಲಿಸುವಂತೆ ಹೈಕೋರ್ಟ್ ಆದೇಶ

ಬೆಂಗಳೂರು, ಮಂಗಳವಾರ, 6 ನವೆಂಬರ್ 2018 (09:01 IST)

ಬೆಂಗಳೂರು : ಬೆಂಗಳೂರನ್ನು ಕಸ ಮುಕ್ತ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕ್ರಿಮಿನಲ್ ದೂರು ದಾಖಲಿಸುವಂತೆ ಹೈಕೋರ್ಟ್ ಆದೇಶಿಸಿದೆ.


ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ವಿಚಾರ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ಹೈಕೋರ್ಟ್, ಸ್ವಚ್ಛಗೊಳಿಸಿದ ಸ್ಥಳದಲ್ಲಿ ಕಸ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಬಿಬಿಎಂಪಿ ಹಾಗೂ ನಗರ ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಅಷ್ಟೇ ಅಲ್ಲದೇ ಪೌರಕಾಯ್ದೆಯ ಅನ್ವಯ ಕಸ ಹಾಕಿದವರ ವಿರುದ್ಧ ದೂರು ದಾಖಲಿಸಲು ಕೂಡ ಸೂಚನೆ ನೀಡಿದೆ.


ಹೈಕೋರ್ಟ್ ಆದೇಶದ ಕುರಿತು ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಆಡಳಿತ ಪಕ್ಷ ನಾಯಕ ಶಿವರಾಜ್, ಪಾಲಿಕೆ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಿದ್ದು, ಬ್ಲಾಕ್ ಸ್ಟಾಟ್ ನಲ್ಲಿ ಕಸ ಹಾಕಿದವರ ಮಾಹಿತಿ ಪೊಲೀಸರಿಗೆ ನೀಡುತ್ತೇವೆ. ಹೈಕೋರ್ಟ್ ನಿರ್ದೇಶನದ ಕಸ ಮುಕ್ತ ನಗರವನ್ನಾಗಿ ಮಾಡಲು ಪಾಲಿಕೆಗೆ ಸಹಾಯ ಆಗಲಿದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವ್ಯಕ್ತಿಯನ್ನು ಕೊಂದ ಹುಲಿಯ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಸೇಡು ತೀರಿಸಿಕೊಂಡ ಗ್ರಾಮಸ್ಥರು

ಲಕ್ನೋ : 50 ವರ್ಷದ ವ್ಯಕ್ತಿಯನ್ನು ಕೊಂದು ಹಾಕಿದ ಹುಲಿಯ ಮೇಲೆ ಸೇಡು ತೀರಿಸಿಕೊಳ್ಳಲು ಗ್ರಾಮಸ್ಥರು ಅದರ ...

news

ಗೆಳೆಯನ ಜೊತೆ ಕುಳಿತು ಮಾತನಾಡುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಮುಂಬೈ : 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಆಕೆಯ ಗೆಳೆಯ ಜೊತೆ ಕುಳಿತು ಮಾತನಾಡುತ್ತಿರುವ ವೇಳೆ ಕಾಮುಕರು ...

news

ಎರಡನೇ ಮದುವೆಯಾಗಲು ನಿರಾಕರಿಸಿದ ವಿವಾಹಿತನಿಗೆ ಯುವತಿಯ ಮಾವಂದಿರು ಮಾಡಿದ್ದೇನು

ಮೈಸೂರು : ಯುವತಿಯೊಬ್ಬಳ ಜೊತೆ ಎರಡನೇ ಮದುವೆಯಾಗಲು ನಿರಾಕರಿಸಿದ್ದಕ್ಕೆ ವಿವಾಹಿತನೊಬ್ಬನನ್ನು ಯುವತಿಯ ...

news

ಮತ ಎಣಿಕೆಗೆ ಸಕಲ ಸಿದ್ಥತೆ ಕೈಗೊಂಡ ಜಿಲ್ಲಾಡಳಿತ

ಜಮಖಂಡಿ ವಿಧಾನಸಭೆ ಉಪಚುನಾವಣೆಯ ಫಲಿತಾಂಶ ನ.12ರಂದು ಹೊರ ಬೀಳಲಿದ್ದು, ಬಾಗಲಕೋಟೆ ಜಿಲ್ಲಾಡಳಿತ ...

Widgets Magazine