ಕೆಪಿಸಿಸಿ ಅಧ್ಯಕ್ಷರ ಆಯ್ಕೆಯಲ್ಲಿ ಹಸ್ತಕ್ಷೇಪವಿಲ್ಲ: ಮಲ್ಲಿಕಾರ್ಜುನ್ ಖರ್ಗೆ

ಬೆಂಗಳೂರು, ಶುಕ್ರವಾರ, 3 ಮಾರ್ಚ್ 2017 (16:32 IST)

ಕೆಪಿಸಿಸಿ ಅಧ್ಯಕ್ಷರ ಆಯ್ಕೆಯಲ್ಲಿ ಹಸ್ತಕ್ಷೇಪ ನಡೆಸುವುದಿಲ್ಲ. ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
 
 ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಹೈಕಮಾಂಡ್ ನನ್ನ ಅಭಿಪ್ರಾಯ ಕೇಳಿದಲ್ಲಿ ಹೇಳುತ್ತೇನೆ. ಅದನ್ನು ಬಿಟ್ಟು ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ ನನ್ನ ಪಾತ್ರವಿರುವುದಿಲ್ಲ ಎಂದು ತಿಳಿಸಿದ್ದಾರೆ.
 
ಹೈದ್ರಾಬಾದ್- ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷರು ನಿವಾಸಕ್ಕೆ ಆಗಮಿಸಿದ್ದರು. ನಿನ್ನೆ 21 ಶಾಸಕರೊಂದಿಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
 
ಡೈರಿ ವಿವಾದ ಮುಗಿದ ಅಧ್ಯಾಯವಾಗಿದ್ದರಿಂದ ರಾಜಕೀಯ ಕೆಸರೆರಚಾಟ ಸೂಕ್ತವಲ್ಲ. ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸುವುದು ಸೂಕ್ತ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಜಿ.ಪರಮೇಶ್ವರ್ ಸಿಎಂ ಸಿದ್ದರಾಮಯ್ಯ Kpcc President Mallikarjun Kharge Congress Hoghcommand G.parameshwar Cm Siddaramaiah

ಸುದ್ದಿಗಳು

news

ಐಟಿ ಅಧಿಕಾರಿಗಳ ವಿರುದ್ಧವೇ ಕೇಸ್ ದಾಖಲಿಸಿದ ಗೋವಿಂದರಾಜು

ಕಾಂಗ್ರೆಸ್ ಹೈಕಮಾಂಡ್`ಗೆ ರಾಜ್ಯ ಕಾಂಗ್ರೆಸ್ ನಾಯಕರು ಕಪ್ಪ ನೀಡಿದ್ದಾರೆನ್ನಲಾದ ಡೈರಿ ರಾಜ್ಯಾದ್ಯಂತ ಭಾರೀ ...

news

ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ: ಮಾಜಿ ಸಚಿವ ಸೊಗಡು ಶಿವಣ್ಣ ನಿವಾಸದಲ್ಲಿ ಅತೃಪ್ತರ ಸಭೆ

ಬೆಂಗಳೂರು: ಬಿಜೆಪಿಯಲ್ಲಿ ನಿರ್ಲಕ್ಷಿಸಲಾಗುತ್ತದೆ ಎನ್ನುವ ಅಸಮಾಧಾನದ ಹಿನ್ನೆಲೆಯಲ್ಲಿ ಲಿಂಗಾಯುತ ನಾಯಕರು ...

news

ಅಪಾರ್ಟಮೆಂಟ್‌ಗೆ ನುಗ್ಗಲೆತ್ನಿಸಿದ ಚಿರತೆಯನ್ನು ಹಿಮ್ಮೆಟ್ಟಿಸಿದ ನಾಯಿಗಳು( ವಿಡಿಯೋ)

ಮನುಷ್ಯನ ಸ್ವಾರ್ಥಕ್ಕೆ ಕಾಡುಗಳು ನಾಶವಾಗುತ್ತಿರುವುದು ಕಾಡುಪ್ರಾಣಿಗಳು ಆಹಾರ, ನೀರು ಹುಡುಕಿಕೊಂಡು ...

news

ಯಾರೆಲ್ಲಾ ಕಾಂಗ್ರೆಸ್‌ಗೆ ಬರ್ತಾರೆ ಎಂದು ಕಾದು ನೋಡಿ: ಪರಮೇಶ್ವರ್

ಬೆಂಗಳೂರು: ಚುನಾವಣೆಯ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಸಾಮಾನ್ಯ. ಕಾಂಗ್ರೆಸ್ ಪಕ್ಷಕ್ಕೆ ಬರುವವರ ಸಂಖ್ಯೆ ...

Widgets Magazine