ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಯಾವುದೇ ಅಭ್ಯರ್ಥಿಗೆ ನಾನು ಶಿಫಾರಸು ಮಾಡಿಲ್ಲ. ನೆರವು ನೀಡಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಐಟಿ ಬಿಟಿ ಸಚಿವ ಅಶ್ವಥ್ ನಾರಾಯಣ್ ಆಗ್ರಹಿಸಿದ್ದಾರೆ. ಪಿಎಸ್ ಐ ನೇಮಕಾತಿಯಲ್ಲಿ ಸಚಿವರ ಪುತ್ರರೊಬ್ಬರು ಭಾಗಿಯಾಗಿದ್ದಾರೆ. ಅವರಿಗೆ ಯಾಕೆ ನೋಟಿಸ್ ನೀಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸೋಮವಾರ ತುರ್ತು ಪತ್ರಿಕಾಗೋಷ್ಠಿಯಲ್ಲಿ ಅವರು ಸ್ಪಷ್ಟನೆ ನೀಡಿದರು.