Widgets Magazine
Widgets Magazine

ಈಶ್ವರಪ್ಪರನ್ನು ಬಿಜೆಪಿ ಪಕ್ಷದಿಂದ ತೆಗೆದ್ರೆ ಪ್ರಾಣ ಬಿಡ್ತಾರೆ: ಕುಮಾರಸ್ವಾಮಿ

ಹುಬ್ಬಳ್ಳಿ, ಬುಧವಾರ, 25 ಜನವರಿ 2017 (18:42 IST)

Widgets Magazine

ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪರನ್ನು ಬಿಜೆಪಿ ಪಕ್ಷದಿಂದ ಹೊರ ಹಾಕಿದರೆ, ಅವರು ಅಲ್ಲೇ ಪ್ರಾಣ ಬಿಡುತ್ತಾರೆ. ಅವರು ಅಷ್ಟೊಂದು ನಿಷ್ಠಾವಂತರು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಅವರು, ನನ್ನ ಸಂಪುಟದಲ್ಲಿ ಸೇವೆ ಸಲ್ಲಿಸಿರುವುದನ್ನು ಗಮನಿಸಿದ್ದೇನೆ. ಅವರು ಬಿಜೆಪಿ ಪಕ್ಷದ ನಿಷ್ಠಾವಂತ ನಾಯಕ. ಒಂದು ವೇಳೆ ಅವರನ್ನು ಬಿಜೆಪಿ ಪಕ್ಷದಿಂದ ಹೊರ ಹಾಕಿದರೆ, ಅವರು ಅಲ್ಲೇ ಪ್ರಾಣ ಬಿಡುತ್ತಾರೆ. ಅವರು ಅಷ್ಟೊಂದು ನಿಷ್ಠಾವಂತರು ಎಂದು ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿದರು.
 
ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಹೊರ ಹಾಕಲು ಹುನ್ನಾರ ನಡೆಸಿದ್ದಾರೋ, ಅವರೇ ಈ ಹಿಂದೆ ಬಿಜೆಪಿ ಪಕ್ಷದಿಂದ ಹೊರ ಬಂದು ಜೆಡಿಎಸ್ ಬಾಗಿಲು ತಟ್ಟಿದ್ದರು ಎಂದು ಯಡಿಯೂರಪ್ಪಗೆ ಟಾಂಗ್ ನೀಡಿದರು.
 
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ಜೊತೆ ಚೆಲ್ಲಾಟವಾಡುತ್ತಿವೆ. ಕೇಂದ್ರ ಸಚಿವರಾದ ಸದಾನಂದಗೌಡ, ಅನಂತಕುಮಾರ್‌ ಏನು ಮಾಡುತ್ತಿದ್ದಾರೆ. ಕರ್ನಾಟಕ ಈ ದೇಶದ ಭೂಪಟದಲ್ಲಿ ಇದೆ ಎಂಬುದನ್ನ ಕೇಂದ್ರ ಸರ್ಕಾರ ಮರೆತಂತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮತ್ತಷ್ಟು ಕಾಂಗ್ರೆಸ್ ಮುಖಂಡರು ಐಟಿ ಬಲೆಗೆ: ಯಡಿಯೂರಪ್ಪ ಭವಿಷ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವ ರಮೇಶ್ ಜಾರಕಿಹೊಳಿ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ...

news

ಹಲ್ಲೆ ಪ್ರಕರಣ: 'ಕಾಗೆ' ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ...

news

ಯಡಿಯೂರಪ್ಪ-ಈಶ್ವರಪ್ಪ ಫೈಟ್: ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್

ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಿಂದ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ...

news

ಬಿಜೆಪಿ ಸೇರಿದ ನಟಿ ರಿಮಿ ಸೇನ್

ಕಲರ್ಸ್ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 9ನೇ ಆವೃತ್ತಿಯಲ್ಲಿ ಕಾಣಿಸಿಕೊಂಡಿದ್ದ ನಟಿ ರಿಮಾ ...

Widgets Magazine Widgets Magazine Widgets Magazine