ಅಬ್ ಕಿ ಬಾರ್ ಯಡಿಯೂರಪ್ಪ ಸರಕಾರ: ಸಿ.ಟಿ.ರವಿ ಘೋಷಣೆ

ಬೆಂಗಳೂರು, ಶನಿವಾರ, 4 ಮಾರ್ಚ್ 2017 (16:13 IST)

Widgets Magazine

ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ನಂತರ ಇತರ ಪಕ್ಷಗಳ ಶಾಸಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಜೆಪಿ ಮುಖಂಡ ಸಿ.ಟಿ,ರವಿ ತಿಳಿಸಿದ್ದಾರೆ. 
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎನ್ನುವುದಕ್ಕೆ ವಿಧಾನಪರಿಷತ್ ಸದಸ್ಯ ಗೋವಿಂದರಾಜು ಅವರ ನಿವಾಸದಲ್ಲಿ ದೊರೆತ ಡೈರಿ ಸಾಕ್ಷಿಯಾಗಿದೆ. ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ ಸಿಎಂ ಮತ್ತು ಅವರ ಕುಟುಂಬದ ಸದಸ್ಯರು ಲಂಚದ ಹಣ ಪಡೆದಿರುವುದು ಬಹಿರಂಗವಾಗಿದೆ ಎಂದರು.    
 
ಡೈರಿಯ ಬಗ್ಗೆ ಸಿಬಿಐ ತನಿಖೆ ನಡೆದಲ್ಲಿ ಸತ್ಯ ಸಂಗತಿ ಬಯಲಿಗೆ ಬರುತ್ತದೆ. ಮುಂಬರುವ ಚುನಾವಣೆಯಲ್ಲಿ ನೇತೃತ್ವದ ಸರಕಾರಕ್ಕೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರೂ ರಾಜ್ಯ ಸರಕಾರ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸದೆ ಆರೋಪ, ಪ್ರತ್ಯಾರೋಪದಲ್ಲಿ ತೊಡಗಿದೆ. ಇದೊಂದು ಜನವಿರೋಧಿ, ರೈತ ವಿರೋಧಿ ಸರಕಾರವಾಗಿದೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಮೆರಿಕದಲ್ಲಿ ಮತ್ತೊರ್ವ ಭಾರತೀಯನ ಹತ್ಯೆ

ನ್ಯೂಯಾರ್ಕ್: ಭಾರತೀಯ ಮೂಲದ ಶ್ರೀನಿವಾಸ್ ಹತ್ಯೆಯ ನೆನಪು ಮಾಸುವ ಮುನ್ನವೇ ಅಮೆರಿಕದಲ್ಲಿ ಮತ್ತೊಬ್ಬ ...

news

ಕಾಂಗ್ರೆಸ್ ಪಕ್ಷಕ್ಕೆ ಸೋಲಾದಲ್ಲಿ ಕಾಂಗ್ರೆಸ್ಸಿಗರೇ ಕಾರಣ: ಸುರೇಶ್ ಗೌಡ

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಶಕ್ತಿ ವಿಪಕ್ಷಗಳಿಗಿಲ್ಲ. ಒಂದು ವೇಳೆ, ಕಾಂಗ್ರೆಸ್ ಪಕ್ಷಕ್ಕೆ ...

news

ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ಸರಕಾರ ವಿಫಲ: ದೇವೇಗೌಡ

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ...

news

ಅಮಿತ್ ಶಾ ಆದೇಶಗಳನ್ನು ಯಡಿಯೂರಪ್ಪ ಪಾಲಿಸುತ್ತಿಲ್ಲ: ಈಶ್ವರಪ್ಪ ಆಕ್ರೋಶ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೀಡಿದ ...

Widgets Magazine