ಬಿಸಿಲೂರಿನಲ್ಲಿ ಅ. 11ರಂದು ಅಂತರ ಮಹಾವಿದ್ಯಾಲಯಗಳ ಕ್ರೀಡಾಕೂಟ

ಕಲಬುರಗಿ, ಬುಧವಾರ, 10 ಅಕ್ಟೋಬರ್ 2018 (14:58 IST)

ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದಿಂದ “38ನೇ ಅಂತರ ಮಹಾವಿದ್ಯಾಲಯಗಳ 2018-19”ರ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರಂದು ಗುಲಬರ್ಗಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಬೆಂಗಳೂರಿನ ಅಂತರರಾಷ್ಟೀಯ ಕ್ರೀಡಾಪಟು ಚೇತನ ಬಿ. ಮುಖ್ಯ ಅತಿಥಿಗಳಾಗಿ, ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಜಯ ಭಾಸ್ಕರ್, ವಿದ್ಯಾವಿಷಯಕ ಪರಿಷತ್ ಸದಸ್ಯ ಬಿ.ಪಿ. ಬುಳ್ಳಾ ಅತಿಥಿಗಳಾಗಿ ಪಾಲ್ಗೊಳ್ಳುವರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ಆರ್. ನಿರಂಜನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಕ್ರೀಡಾಕೂಟದ ಬಹುಮಾನ ವಿತರಣಾ ಸಮಾರಂಭವು ಅಕ್ಟೋಬರ್ 12ರಂದು ಸಂಜೆ 4.15 ಗಂಟೆಗೆ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್.ಆರ್. ನಿರಂಜನ್ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ.  ವಿಧಾನ ಪರಿಷತ್ ಶಾಸಕ ಬಿ.ಜಿ. ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಚಂದ್ರಶೇಖರ ನಿಟ್ಟೂರೆ, ಮೌಲ್ಯಮಾಪನ ಕುಲಸಚಿವ ಪ್ರೊ. ಡಿ.ಎಂ.ಮದ್ರಿ ಹಾಗೂ ವಿತ್ತಾಧಿಕಾರಿ ಪ್ರೊ. ರಾಜನಾಳಕರ ಲಕ್ಷ್ಮಣ ಅತಿಥಿಗಳಾಗಿ ಪಾಲ್ಗೊಳ್ಳುವರು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಸಾಯಿಖಾನೆಗೆ ಸ್ಮಾರ್ಟ್ ಸಿಟಿ ಅನುದಾನ ಬಳಕೆಗೆ ಬಿಜೆಪಿ ವಿರೋಧ

ಗೋ ಕಳ್ಳರಿಗೆ ರಕ್ಷಣೆ ಕೊಡುವ ಕೆಲಸ ಸರಕಾರದವರು ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಹದಗೆಟ್ಟ ರಸ್ತೆ ಸರಿಪಡಿಸಿದ ಮಹಿಳೆಯರು

ರಸ್ತೆ ದುರಸ್ಥಿ ಮಾಡಿಸಿಕೊಡಿ ಎಂದು ಗ್ರಾಮ ಪಂಚಾಯಿತಿಗೆ ಆಗ್ರಹ, ಮನವಿ ಮಾಡಿದರೂ ಪ್ರಯೋಜನವಾಗದ ...

Widgets Magazine