ಐಟಿ ದಾಳಿ: ಸಚಿವ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು, ಶುಕ್ರವಾರ, 4 ಆಗಸ್ಟ್ 2017 (12:33 IST)

ಆದಾಯ ತೆರಿಗೆ ಅಧಿಕಾರಿಗಳ ಸತತ ಮೂರನೇ ದಿನದ ವಿಚಾರಣೆಯಿಂದಾಗಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಮೂಲಗಳು ತಿಳಿಸಿವೆ.
 
ಸಚಿವ ಶಿವಕುಮಾರ್ ಆರೋಗ್ಯದಲ್ಲಿ ಏರಪೇರಾಗಿದ್ದರಿಂದ ಡಾ.ರಮಣ್ ರಾವ್ ನೇತೃತ್ವದ ತಂಡ ಅವರ ನಿವಾಸಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
 
ಸದಾಶಿವನಗರದ ನಿವಾಸಕ್ಕೆ ಆಗಮಿಸಿದ ವೈದ್ಯರ ತಂಡ ಸಚಿವ ಶಿವಕುಮಾರ್‌ ಬಿಪಿ ಸೇರಿದಂತೆ ಆರೋಗ್ಯದ ಬಗ್ಗೆ ತಪಾಸಣೆ ನಡೆಸಿದ್ದಾರೆ. ತಪಾಸಣೆಯ ನಂತರ ಮಾಧ್ಯಮಗಳಿಗೂ ಯಾವುದೇ ಪ್ರತಿಕ್ರಿಯೆ ನೀಡದೆ ವಾಪಸಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.  
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಡಿ.ಕೆ.ಶಿವಕುಮಾರ್ ಶಿವಕುಮಾರ್ ಆರೋಗ್ಯ ಐಟಿ ದಾಳಿ ಮೋದಿ ಅಮಿತ್ ಶಾ Modi It Raid Shivkumar Health Amit Sha D.k.shivkumar

ಸುದ್ದಿಗಳು

news

ಬಿಜೆಪಿ ನಾಯಕರ ವಿರುದ್ಧ ಮತ್ತೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಡಿಕೆ ಶಿವಕುಮಾರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ...

news

ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು: ಸತತ ಎರಡು ದಿನದಿಂದ ಐಟಿ ಅಧಿಕಾರಿಗಳ ತಪಾಸಣೆಯಿಂದ ತೀವ್ರ ಒತ್ತಡಕ್ಕೊಳಗಾಗಿರುವ ಸಚಿವ ಡಿಕೆ ...

news

ಕಾಂಗ್ರೆಸ್ ಹಿಂದಿಕ್ಕಿ ಬಿಜೆಪಿ ಈಗ ನಂ.1

ನವದೆಹಲಿ: ರಾಜ್ಯಸಭೆಯಲ್ಲಿ ಇದುವರೆಗೆ ಅತೀ ದೊಡ್ಡ ಪಕ್ಷವೆಂಬ ಹೆಗ್ಗಳಿಕೆ ಹೊಂದಿದ್ದ ಕಾಂಗ್ರೆಸ್ ಇದೀಗ ಆ ...

news

ರಾಹುಲ್ ಗಾಂಧಿ ವಿರುದ್ಧ ಸಿಟ್ಟಿಗೆದ್ದ ಸುಷ್ಮಾ ಸ್ವರಾಜ್

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವರ್ತನೆಗೆ ...

Widgets Magazine