ಜಂತಕಲ್ ಮೈನಿಂಗ್: ಮಾಜಿ ಸಿಎಂ ಕುಮಾರಸ್ವಾಮಿಗೆ ರಿಲೀಫ್

ಬೆಂಗಳೂರು, ಗುರುವಾರ, 10 ಆಗಸ್ಟ್ 2017 (13:54 IST)

ಜಂತಕಲ್ ಮೈನಿಂಗ್ ಪ್ರಕರಣ ಕುರಿತಂತೆ ಹೈಕೋರ್ಟ್ ಪೀಠ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ರಿಲೀಫ್ ಒದಗಿಸಿದೆ.
ಹೈಕೋರ್ಟ್‌ನ ಏಕಸದಸ್ಯ ಪೀಠ ಸುಪ್ರೀಂಕೋರ್ಟ್‌ನಲ್ಲಿ ಜಂತಕಲ್ ಮೈನಿಂಗ್ ತನಿಖಾ ವರದಿ ಸಲ್ಲಿಸುವವರೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ ಎಂದು ಕೋರ್ಟ್ ಮೂಲಗಳು ತಿಳಿಸಿವೆ.
 
ಜಂತಕಲ್ ಮೈನಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲು ಬಯಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು.
 
ಹೈಕೋರ್ಟ್‌ನ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠ, ನಿರೀಕ್ಷಣಾ ಜಾಮೀನು ಮಂಜೂರು ಮಾಡಿ, ಸಾಕ್ಷಿಗಳ ಯಾವುದೇ ರೀತಿಯ ಪ್ರಭಾವ ಬೀರಬಾರದು. ಪ್ರತಿ ಸೋಮುವಾರ ಮತ್ತು ಗುರುವಾರ ಎಸ್‌ಐಟಿ ಕಚೇರಿಗೆ ತೆರಳಿ ಸಹಿ ಮಾಡಬೇಕು. ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಕರೆದಾಗ ಹಾಜರಾಗಬೇಕು ಎನ್ನುವ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ. 
 
ಇದೀಗ ವಿಶೇಷ ತನಿಖಾ ತಂಡ ಜಂತಕಲ್ ಮೈನಿಂಗ್ ತನಿಖೆಯನ್ನು ಪೂರ್ಣಗೊಳಿಸಿ ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸುವವರೆಗೆ ಹೈಕೋರ್ಟ್ ಏಕಸದಸ್ಯ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದು ಮಾಜಿ ಸಿಎಂ ಕುಮಾರಸ್ವಾಮಿಗೆ ಭಾರಿ ರಿಲೀಫ್ ದೊರೆತಂತಾಗಿದೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೂಢನಂಬಿಕೆ ನಿವಾರಿಸಲು ಏಳು ಬಾರಿ ಚಾಮರಾಜನಗರಕ್ಕೆ ಭೇಟಿ: ಸಿಎಂ

ಚಾಮರಾಜನಗರಕ್ಕೆ ಏಳು ಬಾರಿ ಭೇಟಿ ನೀಡಿದ್ದರೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿದಿದ್ದೇನೆ ಎಂದು ಸಿಎಂ ...

news

ಐಟಿ ನೋಟಿಸ್ ಬಂದಿಲ್ಲ, ಖಾತೆ ಬ್ಲಾಕ್ ಆಗಿಲ್ಲ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಬಂದಿಲ್ಲ. ಬ್ಯಾಂಕ್ ಖಾತೆಗಳು ಬ್ಲಾಕ್ ಆಗಿಲ್ಲ ಎಂದು ಇಂಧನ ...

news

ಪ್ರತ್ಯೇಕ ಧರ್ಮ: ಒಗ್ಗಟ್ಟಾಗಿ ಬಂದಲ್ಲಿ ಶಿಫಾರಸು ಸಿಎಂ ಸ್ಪಷ್ಟನೆ

ಬೆಂಗಳೂರು: ವೀರಶೈವ ಮಹಾಸಭೆ ಮತ್ತು ಲಿಂಗಾಯುತ ಧರ್ಮದವರು ಒಂದಾಗಿ ಬಂದಲ್ಲಿ ಲಿಂಗಾಯತ ಪ್ರತ್ಯೇಕ ...

news

ತಮಿಳುನಾಡು: ಪಳನಿಸ್ವಾಮಿ-ಪನ್ನೀರ್ ಸೆಲ್ವಂ ಬಣ ವಿಲೀನ?

ಚೆನ್ನೈ: ಎಐಎಡಿಎಂಕೆಯ ಪಳನಿಸ್ವಾಮಿ ಬಣ ಮತ್ತು ಮಾಜಿ ಸಿಎಂ ಪನ್ನೀರ್ ಸೆಲ್ವಂ ಬಣ ವಿಲೀನವಾಗುವ ನಿರ್ಧಾರ ...

Widgets Magazine