ಜಯಲಲಿತಾ ಸಾವಿನ ಪ್ರಕರಣ ತೀವ್ರಗೊಂಡ ವಿಚಾರಣೆ

ಬೆಂಗಳೂರು, ಶನಿವಾರ, 8 ಡಿಸೆಂಬರ್ 2018 (16:24 IST)

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಅಧ್ಯಕ್ಷೆ ಜಯಲಲಿತಾ ಸಾವಿನ ಸುತ್ತ ಎದ್ದಿರುವ ಅನುಮಾನಗಳಿಗೆ ಅಂತ್ಯವಾಡಲು ರಚಿಸಿರುವ ಸಮಿತಿ ಇದೀಗ, ಶಶಿಕಲಾ ವಿಚಾರಣೆಗೆ ಸಿದ್ಧತೆ ನಡೆಸಿಕೊಂಡಿದೆ.

ಜಯಲಲಿತಾ ಪರಮಾಪ್ತೆಯಾಗಿದ್ದ ಶಶಿಕಲಾ, ಜಯಲಲಿತಾ ಆಸ್ಪತ್ರೆ ಸೇರಿದ 72 ದಿನಗಳ ಕಾಲ ಅವರೊಂದಿಗೆ ಆಸ್ಪತ್ರೆಯಲ್ಲಿದ್ದರು. ಆದ್ದರಿಂದ ಅವರ ವಿಚಾರಣೆ ಹಾಗೂ ಹೇಳಿಕೆ ಭಾರಿ ಮಹತ್ವ ಪಡೆದುಕೊಳ್ಳುವುದರಿಂದ, ಅರ್ಮುಗಂ ಸ್ವಾಮಿ ನೇತೃತ್ವದ ಸಮಿತಿ, ಶಶಿಕಲಾ ಅವರ ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಕರ್ನಾಟಕ ಕಾರಾಗೃಹ ಇಲಾಖೆಗೆ ಪತ್ರ ಬರೆದಿದೆ.

ಇದರೊಂದಿಗೆ ಶಶಿಕಲಾ ವಿಚಾರಣೆಗೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ತಮಿಳುನಾಡು ಗೃಹ ಇಲಾಖೆ ಕಾರ್ಯದರ್ಶಿಗೂ ಪತ್ರ ಬರೆದಿದೆ. ಅಕ್ರಮ ಆಸ್ತಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾರನ್ನು ಶೀಘ್ರದಲ್ಲಿಯೇ ಭೇಟಿಯಾಗಿ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ಸಮಿತಿ ಇದೇ ಮೊದಲ ಬಾರಿಗೆ ಶಶಿಕಲಾ ಹೇಳಿಕೆ ದಾಖಲಿಸಿಕೊಳ್ಳಲು ಮುಂದಾಗಿದೆ. ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ಜಯಲಲಿತಾ ದಾಖಲಾಗಿದ್ದ ಆಪೊಲೋ ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಯಲಲಿತಾ ಆರೈಕೆ ಮಾಡಿದ ಸಿಬ್ಬಂದಿ ಸೇರಿದಂತೆ ನೂರಕ್ಕೂ ಹೆಚ್ಚು ಜನರ ವಿಚಾರಣೆಯನ್ನು ಮಾಡಿದೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪೊಲೀಸರಿಂದ ಬಂಧನಕ್ಕೊಳಗಾದ ವಾಟಾಳ್ ನಾಗರಾಜ್

ಕನ್ನಡ ಪರ ಹೋರಾಟಗಾರ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರಿಂದ ಬಂಧನಕ್ಕೊಳಗಾದ ವಾಟಾಳ್ ನಾಗರಾಜ್

ಕನ್ನಡ ಪರ ಹೋರಾಟಗಾರ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ರನ್ನು ಪೊಲೀಸರು ಬಂಧಿಸಿದ್ದಾರೆ.

news

ಕೇಂದ್ರ ಸಚಿವ ದಿ.ಅನಂತಕುಮಾರ ಅಸ್ಥಿ ಸಂಗಮದಲ್ಲಿ ವಿಸರ್ಜನೆ

ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕರಾಗಿದ್ದ ದಿವಂಗತ ಅನಂತಕುಮಾರ್ ಅವರ ಅಸ್ಥಿ ವಿಸರ್ಜನೆ ನಡೆಯಿತು.

news

ಮಸ್ಕಲ್ ಕಾಫಿ ತೋಟದಲ್ಲಿ ನಡೆಯುತ್ತಿರೋದು ಏನು ಗೊತ್ತಾ?

ಪಾಲಿಬೆಟ್ಟದಲ್ಲಿರುವ ಮಸ್ಕಲ್ ಕಾಫಿ ತೋಟದಲ್ಲಿ ಕಳೆದ 50 ವರ್ಷಗಳಿಂದ ಕೆಲಸ ಮಾಡುತ್ತಿದ್ದವರವನ್ನು ...

Widgets Magazine