ವಿಪಕ್ಷ ಸ್ಥಾನದಿಂದ ಕೆ.ಎಸ್.ಈಶ್ವರಪ್ಪಗೆ ಕೊಕ್?

ಬೆಂಗಳೂರು, ಗುರುವಾರ, 12 ಜನವರಿ 2017 (12:26 IST)

Widgets Magazine

ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಲ್ಲಿ ಸಕ್ರಿಯವಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸ್ಥಾನದಿಂದ ಅವರನ್ನು ಕೈಬಿಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
 
ಆಗ್ನೇಯ ಶಿಕ್ಷಕ ಕ್ಷೇತ್ರದ ಉಪಚುನಾವಣೆ ಸಿದ್ಧತೆಯ ಹೆಸರಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನೇತೃತ್ವದಲ್ಲಿ ಪರಿಷತ್ ಸದಸ್ಯರ ಸಭೆ ಕರೆಯಲಾಗಿದೆ. ಆದರೆ, ಈ ಮಹತ್ವದ ಸಭೆಗೆ ಕೆ.ಎಸ್.ಈಶ್ವರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ ಎಂದು ತಿಳಿದು ಬಂದಿದೆ. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು. ಆದರೆ, ರಾಯಣ್ಣ ಬ್ರಿಗೇಡ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರೋಧ ವ್ಯಕ್ತಪಡಿಸಿದ್ದರು. 
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಸಕ್ರಿಯ ಕಾರ್ಯಕರ್ತರಾಗಿ ಯಡಿಯೂರಪ್ಪ ಅವರ ಕೆಂಗಣ್ಣಿಗೆ ಗುರಿ ಆಗಿರುವ ಕೆ.ಎಸ್.ಈಶ್ವರಪ್ಪ ಅವರನ್ನು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಸ್ಥಾನದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಎಸ್ಸೆಸ್ಸೆಲ್ಸಿ ಎಕ್ಸಾಂಗೆ ಹೊಸ ನಿರ್ಬಂಧ

ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ತಂದಿರುವ ಹೊಸ ನಿಯಮದ ಪ್ರಕಾರ ಇನ್ನು ಮುಂದೆ ಪರೀಕ್ಷೆಗೆ ತಡವಾಗಿ ...

news

ರಾಯಣ್ಣ ಬ್ರಿಗೇಡ್‌ನ ಚಟುವಟಿಕೆಯಲ್ಲಿ ಭಾಗವಹಿಸುವಂತಿಲ್ಲ: ಈಶುಗೆ ಪರೋಕ್ಷ ಎಚ್ಚರಿಕೆ ನೀಡಿದ ಯಡ್ಡಿ

ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಚಟುವಟಿಕೆಯಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸುವಂತಿಲ್ಲ ...

news

ಜಲ್ಲಿಕಟ್ಟು ನಿಷೇಧ ತೆರವುಗೊಳಿಸಲು ಸುಪ್ರೀಂ ನಕಾರ

ಜಲ್ಲಿಕಟ್ಟು ಮೇಲಿನ ನಿಷೇಧ ತೆರವುಗೊಳಿಸಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ. ಈ ಮೂಲಕ ತಮಿಳುನಾಡು ...

news

ಮತ್ತೀಗ ವೈರಲ್ ಆಯ್ತು ಸಿಆರ್‌ಪಿಎಫ್ ಯೋಧನ ವಿಡಿಯೋ; ಈತನ ಅಳಲೇನು?

ಬಿಎಸ್ಎಫ್ ಯೋಧನೋರ್ವ ತಮಗೆ ಕಳಪೆ ಗುಣಮಟ್ಟದ ಆಹಾರ ನೀಡುತ್ತಾರೆ ಎಂದು ಬಾಂಬ್ ಸಿಡಿಸುವುದರ ಮೂಲಕ ದೇಶಾದ್ಯಂತ ...

Widgets Magazine Widgets Magazine