ಲಂಚಕ್ಕೆ ಬ್ರೇಕ್ ಹಾಕಿ ಎಂದು ಖಡಕ್ ಎಚ್ಚರಿಕೆ ನೀಡಿದ ಸಚಿವ

ಬುಧವಾರ, 12 ಸೆಪ್ಟಂಬರ್ 2018 (18:29 IST)

ಸಬ್ ರಜಿಸ್ಟ್ರಾರ್, ತಹಸೀಲ್ದಾರ್, ಆರ್.ಟಿ.ಓ ಸೇರಿದಂತೆ ಇತರ ಇಲಾಖೆಗಳಲ್ಲಿ ಲಂಚದ ವ್ಯವಹಾರ ಎಲ್ಲೆ ಮೀರುತ್ತಿದೆ. ತೆಗೆದುಕೊಳ್ಳುವುದಕ್ಕೆ ಬ್ರೇಕ್ ಹಾಕದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಖರ್ಗೆ, ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಅಧಿಕಾರಿಗಳು ಸರಕಾರಕ್ಕಾಗಿ ಕೆಲಸ ಮಾಡುತ್ತಿದ್ದಾರೋ ಅಥವಾ ತಮಗೆ ಬೇಕಾದ ಜನರಿಗಾಗಿ ಕೆಲಸ ಮಾಡುತ್ತಿದ್ದಾರೋ ಎನ್ನುವ ಅನುಮಾನ ಬರುತ್ತಿದೆ. ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ತಮಗೆ ಬೇಕಾದವರಿಗೆ ನೋಂದಣಿ ಮಾಡಿಕೊಡಲಾಗುತ್ತಿದೆ. ಲಂಚದ ಬಗ್ಗೆ ದೂರುಗಳು ವ್ಯಾಪಕವಾಗಿ ಬರುತ್ತಿವೆ.

ಲಂಚಕ್ಕೆ ಬ್ರೇಕ್ ಹಾಕದಿದ್ದರೆ ಕ್ರಮ ಎದುರಿಸಬೇಕಾಗುತ್ತದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಅಧಿಕಾರಗಳಿಗೆ ಖಡಕ್ ವಾರ್ನಿಂಗ್ ನೀಡಿದರು.



ಗಣೇಶ ಚತುರ್ಥಿ: ರೌಡಿ ಪರೇಡ್ ನಡೆಸಿದ ಎಸ್ ಪಿ

ಗಣೇಶ ಚತುರ್ಥಿ ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಣೆ ಆಗಬೇಕು. ಈ ನಿಟ್ಟಿನಲ್ಲಿ ರೌಡಿಗಳ ಪರೇಡ್ ...

ಒಂಟಿ ಮನೆಗೆ ದರೋಡೆ ಹೋದವನಿಗೆ ಥಳಿತ

ಒಂಟಿ ಮನೆಯಲ್ಲಿ ಚಿನ್ನಾಭರಣ, ಹಣ ಹಾಗೂ ಇನ್ನಿತರ ವಸ್ತುಗಳನ್ನು ಕದಿಯುತ್ತಿದ್ದವನು ರೆಡ್ ಹ್ಯಾಡ್ ...

ದಟ್ಟವಾದ ಮಂಜು: ವಾಹನ ಸವಾರರ ಪರದಾಟ

ದಟ್ಟವಾದ ಮುಂಜಾವಿನ ಮಂಜಿನಿಂದಾಗಿ ವಾಹನ ಸವಾರರು ಪರದಾಟ ನಡೆಸುವಂತಾಗಿದೆ.

ಕೇಂದ್ರದ ನೆರೆ ಅಧ್ಯಯನ ತಂಡ ಭೇಟಿ

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ನಿಯೋಗ ಪ್ರಧಾನಿ ಭೇಟಿ ಮಾಡಿದ ಬೆನ್ನಲ್ಲೇ, ಕೇಂದ್ರದ ನೆರೆ ...