ಕೆ.ಜೆ. ಜಾರ್ಜ್ ರಾಜೀನಾಮೆ ಪಡೆಯದಿರಲು ಸಿಎಂ ನಿರ್ಧಾರ

ಬೆಂಗಳೂರು, ಶುಕ್ರವಾರ, 27 ಅಕ್ಟೋಬರ್ 2017 (13:42 IST)

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದ್ದರೂ ಸಚಿವ ಜಾರ್ಜ್ ರಾಜೀನಾಮೆ ಪಡೆಯದಿರಲು ಸಿಎಂ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಆದೇಶದಲ್ಲಿ ಸಚಿವ ಜಾರ್ಜ್ ಹೆಸರಿಲ್ಲ. ಸಿಐಡಿ ಸಲ್ಲಿಸಿದ ಬಿ ರಿಪೋರ್ಟ್ ಬಗ್ಗೆಯೂ ಸುಪ್ರೀಂಕೋರ್ಟ್ ಪ್ರಸ್ತಾಪವೆತ್ತಿಲ್ಲ ಎಂದು ತಿಳಿಸಿದ್ದಾರೆ.
 
ಯಾವುದೇ ಕಾರಣಕ್ಕೂ ಸಚಿವ ಜಾರ್ಜ್ ರಾಜೀನಾಮೆ ಪಡೆಯಲ್ಲ. ರಾಜೀನಾಮೆ ಪಡೆಯುವಂತಹ ಗಂಭೀರ ಆರೋಪಗಳು ಕಾಣುತ್ತಿಲ್ಲ ಎಂದು ಹೇಳಿದ್ದಾರೆ.
 
ಸಚಿವ ಜಾರ್ಜ್ ಸಿಬಿಐ ಮೇಲೆ ಪ್ರಭಾವ ಬೀರುವಂತಹ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿಬಿಐ ಕೇಂದ್ರ ಸರಕಾರದ ಾಧೀನದ್ಲಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಪ್ರಭಾವ ಬೀರುವ ಪ್ರಶ್ನೆಯೇ ಎದುರಾಗುವುದಿಲ್ಲ ಎಂದು ತಿಳಿಸಿದ್ದಾರೆ.
 
ಬಿಜೆಪಿಯವರು ಸಚಿವ ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಆದರೆ, ಅವರು ರಾಜೀನಾಮೆ ನೀಡುವ ಅಗತ್ಯತೆ ನನಗೆ ಕಾಣುವುದಿಲ್ಲ ಎಂದು ತಿಳಿಸಿದ್ದಾರೆ. ಬಿಜೆಪಿ ರಾಜೀನಾಮೆ ಕೇಳುತ್ತಿರುವುದು ಕೇವಲ ರಾಜಕೀಯ ಕಾರಣಕ್ಕಾಗಿ. ಸಚಿವ ಜಾರ್ಜ್ ಗೌರವವನ್ನು ಹಾಳುಮಾಡುವ ಷಡ್ಯಂತ್ರವಾಗಿದೆ ಎಂದು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೋದಿ ಅಲೆ ಅಂತ್ಯ, ರಾಹುಲ್‌ಗೆ ದೇಶ ಮುನ್ನಡೆಸುವ ಸಾಮರ್ಥ್ಯವಿದೆ: ಶಿವಸೇನೆ

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿಯ ಮಿತ್ರಪಕ್ಷವಾಗಿರುವ ಶಿವಸೇನೆ ಸದಾ ತನ್ನದೇ ಮಿತ್ರಪಕ್ಷವನ್ನೇ ...

news

ಸಿಬಿಐ ಎಫ್‌ಐಆರ್ ವಿವರಗಳು ಲಭ್ಯವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಡಿವೈಎಸ್‌ಪಿ ಎಂ.ಕೆ.ಗಣಪತಿ ಪ್ರಕರಣದ ಬಗ್ಗೆ ಸಿಬಿಐ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ...

news

ಸಚಿವರ ಆಕ್ಷೇಪಾರ್ಹ ಸಿಡಿ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪತ್ರಕರ್ತ ಅರೆಸ್ಟ್

ನವದೆಹಲಿ: ಛತ್ತೀಸ್ ಘಡ ಬಿಜೆಪಿ ಸರ್ಕಾರ ಸಚಿವರೊಬ್ಬರನ್ನೊಳಗೊಂಡು ಆಕ್ಷೇಪಾರ್ಹ ದೃಶ್ಯಗಳ ಸಿಡಿಯನ್ನು ...

news

ಕೆಜೆ ಜಾರ್ಜ್ ಪರ ನಿಂತ ಸಿಎಂ: ನಿರೀಕ್ಷಣಾ ಜಾಮೀನು ಪಡೆಯಲು ಸೂಚನೆ

ಬೆಂಗಳೂರು: ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೆಜೆ ಜಾರ್ಜ್ ವಿರುದ್ಧ ಸಿಬಿಐ ಎಫ್ ...

Widgets Magazine
Widgets Magazine