ಚೆನ್ನೈ-ಬೆಂಗಳೂರು ಕೆಎಸ್ ಆರ್ ಟಿಸಿ ಬಸ್ ಗೆ ಬೆಂಕಿ

ಚೆನ್ನೈ, ಶನಿವಾರ, 12 ಆಗಸ್ಟ್ 2017 (11:57 IST)

ಚೆನ್ನೈ: ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಐರಾವತ ಬಸ್ ನಲ್ಲಿ ಚೆನ್ನೈ ಸಮೀಪ ಬೆಂಕಿ ಕಾಣಿಸಿಕೊಂಡಿದ್ದು, ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.


 
ಚೆನ್ನೈ ಗೆ ಸಮೀಪ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಬಸ್ ನಲ್ಲಿ ಸುಮಾರು 44 ಪ್ರಯಾಣಿಕರಿದ್ದರು. ಯಾರಿಗೂ ಯಾವುದೇ ಅಪಾಯವಾಗಿಲ್ಲ. ಆದರೆ ಲಗೇಜ್ ಗಳು ಸುಟ್ಟು ಭಸ್ಮವಾಗಿದೆ ಎಂದು ತಿಳಿದುಬಂದಿದೆ.
 
ತಕ್ಷಣ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆದರೆ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಡ್ರೈವರ್ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಹೊರಗೆ ಕಳುಹಿಸಿದ ಕಾರಣ ದೊಡ್ಡ ಅಪಾಯ ತಪ್ಪಿದೆ.
 
ಇದನ್ನೂ ಓದಿ…  ಶೂಟಿಂಗ್ ನಲ್ಲಿ ಗಾಯ ಮಾಡಿಕೊಂಡ ಬಿಗ್ ಬಿ ಅಮಿತಾಭ್ ಬಚ್ಚನ್
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಕೆಎಸ್ ಆರ್ ಟಿಸಿ ಬಸ್ ಬೆಂಕಿ ಅನಾಹುತ ಅಪಘಾತ ಸುದ್ದಿಗಳು Ksrtc Fire Tragdegy Accident News

ಸುದ್ದಿಗಳು

news

ಉಪೇಂದ್ರ ರಾಜಕೀಯ ಸೇರ್ಪಡೆ ಬಗ್ಗೆ ತಂದೆ ತಾಯಿ ಹೇಳಿದ್ದು

ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯ ಪ್ರವೇಶಕ್ಕೆ ಕ್ಷಣಗಣನೆ ಶುರುವಾಗಿದೆ. ಹಣದ ಹಂಗಿಲ್ಲದೆ ಪ್ರಜಾಕೀಯ ಮಾಡಲು ...

news

ಜ್ವರದ ನಡುವೆಯೂ ರಾಜ್ಯದಲ್ಲಿ ರಾಹುಲ್

ಬೆಂಗಳೂರು: ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಯಚೂರಿಗೆ ಆಗಮಿಸುತ್ತಿರುವ ರಾಹುಲ್ ಗಾಂಧಿಗೆ ...

news

ಅಮಿತ್ ಷಾ ಸ್ವಾಗತಕ್ಕೆ ಓಡೋಡಿ ಬಂದ ಬಿಜೆಪಿ ನಾಯಕರು

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಬೆಂಗಳೂರಿಗೆ ಬಂದಿರುವ ಹಿನ್ನಲೆಯಲ್ಲಿ ಅವರ ಸ್ವಾಗತಕ್ಕೆ ...

news

ನಿತೀಶ್ ಹಾದಿ ಹಿಡಿತಾರಾ ಶರದ್ ಪವಾರ್?

ನವದೆಹಲಿ: ಬಿಜೆಪಿ ಸೋಲಿಸಲೆಂದು ಮಹಾಘಟಬಂದನ್ ಮಾಡಿಕೊಂಡಿದ್ದ ಕಾಂಗ್ರೆಸ್ ಗೇ ಕೈ ಕೊಟ್ಟು ಎನ್ ಡಿಎ ಪಾಳಯ ...

Widgets Magazine