ಬೆಂಗಳೂರು-ಇಂದಿನಿಂದ ನಮ್ಮ ಮೆಟ್ರೋದ ಮೊದಲ ಚಾಲಕ ರಹಿತ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.ಶೀಘ್ರವೇ ನಮ್ಮ ಮೆಟ್ರೋದ ಚಾಲಕ ರಹಿತ ಟ್ರೈನ್ ರಸ್ತೆಗೆ ಇಳಿಯಲಿದೆ.R.V.ರಸ್ತೆಯಿಂದ ಬೊಮ್ಮಸಂದ್ರವರೆಗೆ 18.82 ಕಿ.ಮೀ.ವರೆಗೂ ರೈಲು ಚಲಿಸಲಿದೆ.ಹಳದಿ ಮಾರ್ಗದಲ್ಲಿ ಚಾಲಕ ರಹಿತ ಟ್ರೈನ್ ಚಲಿಸಲಿದ್ದು,ಸದ್ಯ ಚಾಲಕ ರಹಿತ ಮೆಟ್ರೋ ರೈಲು ಹೆಬ್ಬಗೋಡಿ ಡಿಪೋದಲ್ಲಿದೆ.ನಾಲ್ಕು ತಿಂಗಳ ಕಾಲ 37 ಪರೀಕ್ಷೆಗಳು ನಡೆಯಲಿದೆ.ಸಂಶೋಧನಾ ವಿನ್ಯಾಸಗಳು ಮತ್ತು ಗುಣಮಟ್ಟ ಸಂಸ್ಥೆ, ರೈಲ್ವೆ ಸುರಕ್ಷತೆಯ ಮುಖ್ಯ ಆಯುಕ್ತರು, ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸುರಕ್ಷತೆ ಮತ್ತು ರೈಲ್ವೆ ಮಂಡಳಿ ಅನುಮೋದನೆ ನೀಡಲಿದೆ.