ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಇನ್ನೂ ನಿಂತಿಲ್ಲ. ಪಕ್ಷದ ಕಾರ್ಯಕರ್ತರು, ಶಾಸಕರ ವಿರುದ್ಧ ಬಂಡಾಯ ಎದ್ದಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ, ಮೂಡಿಗೆರೆಯಲ್ಲಿ ಡಬಲ್ ಇಂಜಿನ್ ಸರ್ಕಾರದ ಸಾಧನೆಗಳನ್ನು ಹೇಳುತ್ತಾ ವಿಜಯ ಸಂಕಲ್ಪ ಯಾತ್ರೆ ಮಾಡಿತ್ತು.