ಸಚಿವ ರೋಷನ್‌ಬೇಗ್‌ ನಾಲಾಯಕ್: ಜಗದೀಶ್ ಶೆಟ್ಟರ್

ಬೆಂಗಳೂರು, ಶನಿವಾರ, 14 ಅಕ್ಟೋಬರ್ 2017 (14:26 IST)

ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅಸಭ್ಯ ಪದ ಬಳಕೆ ಮಾಡಿದ ಸಚಿವ ರೋಷನ್ ಬೇಗ್ ಒಬ್ಬ ನಾಲಾಯಾಕ್ ಮಂತ್ರಿ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
ದೇಶಕ್ಕಾಗಿ 24 ಗಂಟೆಗಳ ಕಾಲ ಸೇವೆ ಸಲ್ಲಿಸುತ್ತಿರುವ ದೇಶದ ಪ್ರಧಾನಿಯ ವಿರುದ್ಧ ಅಸಭ್ಯ ಪದವನ್ನು ಬಳಸುವ ಸಚಿವ ರೋಷನ್ ಬೇಗ್ ತಮ್ಮ ಕುಟುಂಬದ ಸದಸ್ಯರ ವಿರುದ್ಧ ಎಂತಹ ಪದಗಳ ಬಳಕೆ ಮಾಡುತ್ತಾರೆ? ಎಂದು ಕಿಡಿಕಾರಿದ್ದಾರೆ.
 
ಸಚಿವ ಬೇಗ್ ಪದ ಬಳಕೆಯನ್ನು ನೋಡಿದಲ್ಲಿ ಕಾಂಗ್ರೆಸ್ ಪಕ್ಷದ ಸಂಸ್ಕ್ರತಿ ಎಂತಹದು ಎನ್ನುವುದು ಗೊತ್ತಾಗುತ್ತದೆ. ಕಾಂಗ್ರೆಸ್ ಪಕ್ಷ ಸಂಸ್ಕ್ರತಿ ಹೀನ ಪಕ್ಷವಾಗಿದೆ ಎಂದು ಟೀಕಿಸಿದ್ದಾರೆ.
 
ಕೂಡಲೇ ಸಚಿವ ಸಂಪುಟದಿಂದ ರೋಷನ್‌ಬೇಗ್‌ ಅವರನ್ನು ವಜಾಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಹೋರಾಟ ಆರಂಭಿಸುತ್ತೇವೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಯೋಗೇಶ್ವರ್ ರಾಜೀನಾಮೆಯಿಂದ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಿಲ್ಲ: ಡಿಕೆಶಿ

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ...

news

ಡಿಕೆಶಿ ವಿರುದ್ಧ ವಾಗ್ದಾಳಿ: ಕಾಂಗ್ರೆಸ್‌ ಪಕ್ಷಕ್ಕೆ ಯೋಗೇಶ್ವರ್ ಗುಡ್‌ಬೈ

ಬೆಂಗಳೂರು: ಕಾಂಗ್ರೆಸ್ ನಾಯಕರ ವರ್ತನೆಗೆ ಬೇಸತ್ತು ಪಕ್ಷಕ್ಕೆ ಗುಡ್‌ಬೈ ಹೇಳುತ್ತಿರುವುದಾಗಿ ಚನ್ನಪಟ್ಟಣ ...

news

`ಸುಪ್ರೀಂಕೋರ್ಟ್ ಅವಕಾಶ ನೀಡಿದರೂ ಸಭ್ಯಸ್ಥ ಮಹಿಳೆಯರು ದೇಗುಲ ಪ್ರವೇಶಿಸುವುದಿಲ್ಲ’

ಕೇರಳ: ಸುಪ್ರೀಂಕೋರ್ಟ್ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಕಲ್ಪಿಸಿದರೂ, ...

news

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಆರೋಪಿಗಳ ರೇಖಾಚಿತ್ರ ಬಿಡುಗಡೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡ ಶಂಕಿತ ಆರೋಪಿಗಳ ...

Widgets Magazine
Widgets Magazine