Widgets Magazine
Widgets Magazine

ಪಟ್ಟಿಯಲ್ಲಿ ಹೆಸರಿಲ್ಲದೇ ಇರುವುದನ್ನು ನೋಡಿ ಸಿಎಂ ಸಿದ್ದರಾಮಯ್ಯ ಮನೆಗೆ ಓಡಿದ ಶಾಸಕ ಎನ್ ಹ್ಯಾರಿಸ್!

ಬೆಂಗಳೂರು, ಸೋಮವಾರ, 16 ಏಪ್ರಿಲ್ 2018 (08:34 IST)

Widgets Magazine

ಬೆಂಗಳೂರು: ಕಾಂಗ್ರೆಸ್ ಕೊನೆಗೂ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಅದರ ಜತೆಗೆ ಅಸಮಾಧಾನವೂ ಶುರುವಾಗಿದೆ.
 
ಒಟ್ಟು 224 ವಿಧಾನಸಭೆ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಐದು ಕ್ಷೇತ್ರಗಳನ್ನು ಬಿಟ್ಟು ಉಳಿದೆಲ್ಲಾ ಕಡೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದೆ. ಉಳಿದಂತೆ ಮೇಲುಕೋಟೆಯಲ್ಲಿ ರೈತನಾಯಕ ಪುಟ್ಟಣ್ಣಯ್ಯ ಪುತ್ರ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ ನೀಡಿ ಅಭ್ಯರ್ಥಿ ಘೋಷಿಸುತ್ತಿಲ್ಲ.
 
ಆದರೆ ಅಭ್ಯರ್ಥಿಗಳ ಪಟ್ಟಿಯಲ್ಲಿ ತನ್ನ ಹೆಸರಿಲ್ಲದೇ ಇರುವುದಕ್ಕೆ ಶಾಂತಿ ನಗರ ಶಾಸಕ ಎನ್ ಹ್ಯಾರಿಸ್ ನಿನ್ನೆ ರಾತ್ರಿಯೇ ಸಿಎಂ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
 
ಪುತ್ರ ಮೊಹಮ್ಮದ್ ನಲಪಾಡ್ ಹಲ್ಲೆ ಪ್ರಕರಣದಿಂದಾಗಿ ಈ ಬಾರಿ ಹ್ಯಾರಿಸ್ ಗೆ ಟಿಕೆಟ್ ನೀಡಬಾರದು ಎಂದು ಪಕ್ಷದ ಕೆಲವು ನಾಯಕರೇ ವಿರೋಧ ವ್ಯಕ್ತಪಡಿಸಿದ್ದರು. ಅದರಂತೇ ಹ್ಯಾರಿಸ್ ಗೆ ಟಿಕೆಟ್ ನೀಡಲಾಗಿಲ್ಲ. ಆದರೆ ಅವರು ಪ್ರತಿನಿಧಿಸುವ ಶಾಂತಿ ನಗರ ಕ್ಷೇತ್ರದಲ್ಲಿ ಯಾವುದೇ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಕಾಂಗ್ರೆಸ್ ಹೈಕಮಾಂಡ್ ಕುತೂಹಲ ಮೂಡಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶಾಸಕ ಜಿಗ್ನೇಶ್ ಮೇವಾನಿ ಯನ್ನು ವಶಕ್ಕೆ ಪಡೆದ ಪೊಲೀಸರು. ಕಾರಣ ಏನು ಗೊತ್ತಾ...?

ಜೈಪುರ : ನಾಗೌರ್ ಹಾಗೂ ಜೈಪುರದಾದ್ಯಂತ ಗುಜರಾತಿನ ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರು ಪ್ರವೇಶಿಸದಂತೆ ...

news

ಮಾತೆ ಮಹಾದೇವಿ ಅವರು ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತರು ಬೆಂಬಲ ನೀಡುವಂತೆ ಹೇಳಿರುವುದು ಸರಿಯಲ್ಲ – ನಟ ಚೇತನ್

ಕಲಬುರಗಿ : ಜನಹಿತಕ್ಕಾಗಿ ಶ್ರಮಿಸುತ್ತಿರುವ ಸ್ಯಾಂಡಲ್ ವುಡ್ ನಟ ಚೇತನ್ ಅವರು ಮಾತೆ ಮಹಾದೇವಿ ಅವರು ...

news

ಸಿರಿಯಾ ವಿರುದ್ಧ ಯುದ್ಧ ಘೋಷಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್

ಅಮೇರಿಕಾ : ಸಿರಿಯಾ ಮೇಲೆ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ತ್ರಿವಳಿ ರಾಷ್ಟ್ರಗಳು ಮಿಲಿಟರಿ ದಾಳಿ ...

news

ಯಶ್ ಮತದಾರರಿಗೆ ನೀಡಿದ ಸಲಹೆ ಏನು ಗೊತ್ತಾ…?

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಇದೀಗ ರಾಕಿಂಗ್ ಸ್ಟಾರ್ ಯಶ್ ...

Widgets Magazine Widgets Magazine Widgets Magazine