ವಾಮಮಾರ್ಗದಿಂದ ರಾಜ್ಯಗಳ ಕಬಳಿಕೆ: ಮೋದಿ ವಿರುದ್ಧ ದೇವೇಗೌಡ ವಾಗ್ದಾಳಿ

ಬೆಂಗಳೂರು, ಭಾನುವಾರ, 30 ಜುಲೈ 2017 (15:47 IST)

ಪ್ರಧಾನಿ ನರೇಂದ್ರ ಮೋದಿ ವಾಮ ಮಾರ್ಗದ ಮೂಲಕ ಎಲ್ಲಾ ರಾಜ್ಯಗಳನ್ನು ವಶಕ್ಕೆ ತೆಗೆದುಕೊಳ್ಳಲು ಹೊರಟಿದ್ದಾರೆ ಎಂದು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ.
 
ಗುಜರಾತ್‌ನಲ್ಲಿ ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ ಕೊಡಿಸಿ, ಬಿಜೆಪಿಗೆ ಸೇರ್ಪಡೆಗೊಳಿಸಿ ಪ್ರಧಾನಿ ಮೋದಿ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆಯಾಗಿದ್ದಾರೆ. ಇದಕ್ಕೆ ನನ್ನ ತೀವ್ರ ವಿರೋಧವಿದೆ ಎಂದು ಗುಡುಗಿದ್ದಾರೆ.
 
ತಮಿಳುನಾಡು ಹೊರತುಪಡಿಸಿ ದೇಶಾದ್ಯಂತ ಎಲ್ಲಾ ರಾಜ್ಯಗಳನ್ನು ಕೇಸರಿಕರಣಗೊಳಿಸಲು ಮೋದಿ ಮತ್ತು ಅಮಿತ್ ಶಾ ಸಂಚು ರೂಪಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಬೇಕೆಂದು ಬಿಜೆಪಿಯವರು ವಾಮಮಾರ್ಗ ಅನುಸರಿಸುತ್ತಿರುವುದು ಸರಿಯಲ್ಲ. ಒಂದು ಸೀಟ್‌ಗಾಗಿ ಇಷ್ಟೆಲ್ಲಾ ಮಾಡಬೇಕಾ? ಎಂದು ಪ್ರಶ್ನಿಸಿದ್ದಾರೆ.
 
1972 ರಲ್ಲಿ ಜನಾದೇಶ ವಿರುದ್ಧ ಕಾಂಗ್ರೆಸ್ ಎಲ್ಲಾ ರಾಜ್ಯಗಳನ್ನು ವಶಪಡಿಸಿಕೊಂಡಿತ್ತು. ಇದೀಗ, ಕಾಂಗ್ರೆಸ್‌ನಂತೆ ಬಿಜೆಪಿ ಕೂಡಾ ಎಲ್ಲಾ ರಾಜ್ಯಗಳನ್ನು ವಶಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸಿದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ಎಚ್.ಡಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಪ್ರಧಾನಿ ಮೋದಿ ಎಚ್.ಡಿ.ದೇವೇಗೌಡ ಬಿಜೆಪಿ ಜೆಡಿಎಸ್ ಅಮಿತ್ ಶಾ Bjp Jds Pm Modi Amit Sha H.d.devegowda

ಸುದ್ದಿಗಳು

news

ನೆಹರೂ-ಎಡ್ವಿನಾ ಮೌಂಟ್ ಬೇಟನ್ ಸಂಬಂಧದ ರಹಸ್ಯ ಬಿಚ್ಚಿಟ್ಟ ಎಡ್ವಿನಾ ಪುತ್ರಿ

ನವದೆಹಲಿ: ಭಾರತದ ಪ್ರಥಮ ಪ್ರಧಾನಿ ಜವಹರಲಾಲ್ ನೆಹರೂ ಮತ್ತು ಕೊನೆಯ ಬ್ರಿಟಿಷ್ ವೈಸರಾಯ್ ಲಾರ್ಡ್ ಲೂಯಿಸ್ ...

news

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ ಅರೆಸ್ಟ್

ಬೆಂಗಳೂರು: ಶಾಲಾ ವಿದ್ಯಾರ್ಥಿನಿಯನ್ನು ಪರಿಚಯಿಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ...

news

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಭೇಟಿ ರದ್ದು

ಬೆಂಗಳೂರು: ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುವ ಕಾರ್ಯಕ್ರಮವನ್ನು ...

news

ಜಿಎಸ್ ಟಿ ಭಾರತದ ಆರ್ಥಿಕತೆಯಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ: ಪ್ರಧಾನಿ ಮನ್ ಕಿ ಬಾತ್

ಜಿಎಸ್ ಟಿಯಿಂದ ಓರ್ವ ಸಾಮಾನ್ಯ ವ್ಯಕ್ತಿಗೂ ಲಾಭವಾಗಿದ್ದು, ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗಿದೆ. ಒಂದು ದೇಶ ...

Widgets Magazine