ಮತ್ತೆ ಮೈತ್ರಿ ಸರ್ಕಾರದ ಬೆಂಬಲಕ್ಕೆ ನಿಂತ ಪಕ್ಷೇತರ ಶಾಸಕ ನಾಗೇಶ್‌

ಬೆಂಗಳೂರು, ಗುರುವಾರ, 14 ಫೆಬ್ರವರಿ 2019 (09:32 IST)

ಬೆಂಗಳೂರು : ಜೆಡಿಎಸ್‌ ಮತ್ತು ಕಾಂಗ್ರೆಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್‌ ಪಡೆದಿದ್ದ ಮುಳಬಾಗಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್‌ ಅವರು ಇದೀಗ ಮತ್ತೆ ಮೈತ್ರಿ ಸರ್ಕಾರದ ಬೆಂಬಲಕ್ಕೆ ನಿಂತಿದ್ದಾರೆ.

ಮೈತ್ರಿ ಸರ್ಕಾರದ ಕಾರ್ಯವೈಖರಿ ತೃಪ್ತಿ ನೀಡಿಲ್ಲ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಸಿಕ್ಕಿಲ್ಲ ಎಂದು ಅಸಮಾಧಾನಗೊಂಡ ಮುಳಬಾಗಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್‌ ಹಾಗೂ ರಾಣೇಬೆನ್ನೂರು ಪಕ್ಷೇತರ ಶಾಸಕ ಆರ್. ಶಂಕರ್ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿದ್ದರು. 

 

ಆದರೆ ಇದೀಗ ಮುಳಬಾಗಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್‌ ಮತ್ತೆ ಮೈತ್ರಿ ಸರ್ಕಾರಕ್ಕೆ ನೀಡುವುದಾಗಿ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಬೆಂಬಲ ಪತ್ರವನ್ನು ನೀಡಿದ್ದಾರೆ. 

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

                                                                                                      

 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪರಾರಿಗೆ ಯತ್ನಿಸಿ ಸಿಕ್ಕಿಬಿದ್ದ ಭೂಪ!

ಪತ್ತೆಗೆ ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪಿಯನ್ನು ಬಂಧನ ...

news

ಆಪರೇಷನ್ ಕಮಲ ಆಡಿಯೋ; ಎಸ್‌ಐಟಿ ತನಿಖೆ ಪಕ್ಕಾ

ಆಪರೇಷನ್ ಕಮಲದ ಆಡಿಯೋ ಕುರಿತು ವಿಶೇಷ ತನಿಖಾ ದಳದಿಂದಲೇ ತನಿಖೆಯಾಗುವುದು ಪಕ್ಕಾ ಆಗಿದೆ.

news

ಸಿಎಂ ನಮ್ಮ ಕುಟುಂಬ ಸರ್ವನಾಶಲು ಸೂಚನೆ ನೀಡಿದ್ದಾರೆ ಎಂದ ಶಾಸಕ!

ಸಿಎಂ ಹಾಗೂ ಅವರ ಸಹೋದರರ ವಿರುದ್ಧ ಬಿಜೆಪಿ ಶಾಸಕ ಗಂಭೀರ ಆರೋಪ ಮಾಡಿದ್ದಾರೆ.

news

ವಿಟಿಯು ವಿಂಗಡನೆಗೆ ಹೆಚ್ಚುತ್ತಿದೆ ವಿರೋಧ

ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ ವಿಂಗಡನೆಗೆ ವಿರೋಧ ಹೆಚ್ಚಾಗುತ್ತಿದೆ.

Widgets Magazine