ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ಸಿದ್ಧಪಡಿಸಿದ್ದ ಸಾಕ್ಷ್ಯಚಿತ್ರ ಬೆಂಗಳೂರಿನಲ್ಲಿ ಪ್ರಸಾರವಾಗಿದೆ.ಶನಿವಾರ ರಾತ್ರಿ ಇನ್ಫ್ಯಾಂಟ್ರಿ ರಸ್ತೆಯಲ್ಲಿರುವ ಆಲ್ ಇಂಡಿಯಾ ಸ್ಟುಡೆಂಟ್ಸ್ ಅಸೋಸಿಯೇಷನ್ ಕಚೇರಿಯಲ್ಲಿ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ ಮಾಡಲಾಗಿದೆ. ಈ ಸಂಬಂಧ ಎಐಎಸ್ಎ ಸದಸ್ಯೆ ಅರತ್ರಿಕಾ ಡೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸುಮಾರು 40 ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ವೀಕ್ಷಿಸಲು ಎಐಎಸ್ಎ ಕಚೇರಿಗೆ ಬಂದಿದ್ದರು.ಕ್ರೈಸ್ಟ್ ಕಾಲೇಜು, ಐಐಎಸ್ಸಿ, ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ, ಸೇಂಟ್ ಜೋಸೆಫ್ ಮತ್ತು ಇತರ ಕೆಲವು