Widgets Magazine

ಯಡಿಯೂರಪ್ಪ ವಿರುದ್ಧ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿಲ್ಲ: ಉಗ್ರಪ್ಪ

ಬೆಂಗಳೂರು, ಸೋಮವಾರ, 21 ಆಗಸ್ಟ್ 2017 (17:42 IST)

Widgets Magazine

ಶಿವರಾಂ ಕಾರಂತ ಬಡಾವಣೆ ಭೂಸ್ವಾಧೀನ ಡಿನೋಟಿಫಿಕೇಶನ್ ಕುರಿತಂತೆ ಅಂದಿನ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರೇ ತನಿಖೆಗೆ ಆದೇಶಿಸಿದ್ದರು ಎಂದು ಹಿರಿಯ ಕಾಂಗ್ರೆಸ್ ಮುಖಂಡ ತಿರುಗೇಟು ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಿನ ಸಿಎಂ ಡಿನೋಟಿಫಿಕೇಶನ್ ಪ್ರಕರಣದ ತನಿಖೆ ನಡೆಸುವಂತೆ ಸಿಐಡಿ ಒಪ್ಪಿಸಿದ್ದಾರೆ ಎನ್ನುವುದಕ್ಕೆ ನಮ್ಮ ಬಳಿ ದಾಖಲೆಗಳಿವೆ ಎಂದು ತಿಳಿಸಿದ್ದಾರೆ.
 
ಮಾಜಿ ಸಿಎಂ ಸದಾನಂದಗೌಡರು ಸಿಐಡಿ ತನಿಖೆಗೆ ಆದೇಶಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ ಅವರು, ಯಡಿಯೂರಪ್ಪ ವಿರುದ್ಧದ ಪ್ರಕರಣದಲ್ಲಿ ಸರಕಾರದ ಪಾತ್ರವಿಲ್ಲ. ಅನಗತ್ಯವಾಗಿ ಸರಕಾರದ ವಿರುದ್ಧ ಬಿಜೆಪಿ ಆರೋಪ ಮಾಡುತ್ತಿದೆ ಎಂದು ಗುಡುಗಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಖಾಸಗಿ ದೂರು ದಾಖಲಾಗಿದೆ. ದೂರಿನನ್ವಯ ಸಾಕ್ಷ್ಯಗಳನ್ನು ಸಂಗ್ರಹಿಸಿದ ನಂತರ ಎಸಿಬಿ ಅದಿಕಾರಿಗಳು ವಿಚಾರಣೆಗಾಗಿ ಯಡಿಯೂರಪ್ಪ ಅವರಿಗೆ ಸಮನ್ಸ್ ನೀಡಿದ್ದಾರೆ. 
 
ಸರಕಾರಕ್ಕೆ ದ್ವೇಷ ರಾಜಕಾರಣ ಮಾಡುವ ಸಂಸ್ಕ್ರತಿಯಿಲ್ಲ. ಅಂದಿನ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರೇ ಯಡಿಯೂರಪ್ಪ ವಿರುದ್ಧ ದ್ವೇಷದ ರಾಜಕಾರಣ ಮಾಡಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಳೆಗಾಗಿ ರಾಜ್ಯದಲ್ಲಿ ಮೋಡ ಬಿತ್ತನೆ.. ಹೇಗೆ ಮಾಡಲಾಗುತ್ತಿದೆ ಗೊತ್ತಾ..?

ಮಳೆಗಾಗಿ ರಾಜ್ಯ ಸರ್ಕಾರ ಉದ್ಧೇಸಿಸಿರುವ ಮೋಡ ಬಿತ್ತನೆ ಇವತ್ತಿನಿಂದ ಆರಂಭವಾಗಿದೆ. 36 ಕೋಟಿ ರೂಪಾಯಿ ...

news

ಸೋನಿಯಾ ಭೇಟಿಯಾದ ಗುಜರಾತ್ ಶಾಸಕರು: ಚುನಾವಣೆಗೆ ರಣತಂತ್ರ

ನವದೆಹಲಿ: ಮಹಾತ್ಮಾ ಗಾಂಧಿಯವರ ರಾಜ್ಯದಲ್ಲಿ ಸತ್ಯ ಮತ್ತು ಸಿದ್ಧಾಂತಕ್ಕಾಗಿ ತಮ್ಮ ಹೋರಾಟವನ್ನು ...

news

ಸಿಎಂ ಪಳನಿಸ್ವಾಮಿ, ಪನ್ನೀರ್ ಸೆಲ್ವಂ ಬಣಗಳ ವಿಲೀನ

ಚೆನ್ನೈ: ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಮಾಜಿ ಸಿಎಂ ಪನ್ನೀರ್ ಸೆಲ್ವಂ ಬಣಗಳು ಇಂದು ...

news

ಬಿಎಸ್`ವೈ ವಿರುದ್ಧ ತನಿಖೆಗೆ ಆದೇಶಿಸಿದ್ದ ಡಿ.ವಿ. ಸದಾನಂದಗೌಡ..?

ಶಿವರಾಮ ಕಾರಂತ ಲೇಔಟ್ ಡಿನೋಟಿಫಿಕೇಶನ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. 2012ರ ಏಪ್ರಿಲ್ 12ರಂದೇ ...

Widgets Magazine Widgets Magazine