ಕಂಬಳಕ್ಕೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರಕಾರ ಸಿದ್ಧತೆ

Bangalore, ಬುಧವಾರ, 25 ಜನವರಿ 2017 (13:13 IST)

Widgets Magazine

ಕಂಬಳ‌‌ ಒಂದು ಗ್ರಾಮೀಣ ಕ್ರೀಡೆ. ಅದಕ್ಕೆ ನಮ್ಮ ವಿರೋಧವಿಲ್ಲ. ಅಗತ್ಯ ಬಿದ್ದರೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಜೊತೆಗೆ ಫೆಬ್ರವರಿ 6ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು ಅಲ್ಲಿಯೂ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯವರು ತಿಳಿಸಿದರು.
 
ತಮಿಳುನಾಡಿನ ಜಾನಪದ ಕ್ರೀಡೆ ಜಲ್ಲಿಕಟ್ಟುಗೆ ಅಲ್ಲಿನ ಸರಕಾರ ಸುಗ್ರೀವಾಜ್ಞೆ ಹೊರಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಪರ ಹೋರಾಟ ನಡೆಯುತ್ತಿದೆ. ಈ ಕ್ರೀಡೆಗೂ ಅನುಮತಿ ನೀಡಬೇಕೆಂಬ ವಾದ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸುಗ್ರೀವಾಜ್ಞೆ ಹೊರಡಿಸುವುದಾಗಿ ತಿಳಿಸಿದ್ದಾರೆ.
 
 ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟ ಪುಷ್ಟವಾಗಿ ಬೆಳೆಸಿದ ಕೋಣಗಳನ್ನು ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ ಒಡಿಸುವ ಸ್ಪರ್ಧೆಯೇ ಕಂಬಳ. ಮತ್ತು ಈಗಿನ ಉಡುಪಿ ಜಿಲ್ಲೆಯ ಜಾನಪದದೊಂದಿಗೆ ಹಾಸು ಹೊಕ್ಕಾಗಿದೆ ಈ ಕ್ರೀಡೆ. ಕರಾವಳಿಯ ರೈತಾಪಿ ಜನರು ಭತ್ತದ ಕೊಯಿಲಿನ ನಂತರ ತಮ್ಮ ಮನರಂಜನೆಗೋಸ್ಕರ ಏರ್ಪಡಿಸುತ್ತಿದ್ದ ಈ ಕ್ರೀಡೆ ಕಳೆದ ಅನೇಕ ವರ್ಷಗಳಿಂದ ಸಾಂಘಿಕ ಬಲದೊಂದಿಗೆ ಬೆಳೆಯುತ್ತಿದೆ. ಎರಡು ಕೋಣಗಳ ಕುತ್ತಿಗೆಗೆ ನೊಗ ಕಟ್ಟಿ ಅವುಗಳನ್ನು ಓಡಿಸಲಾಗುವ ಈ ಕ್ರೀಡೆಯಲ್ಲಿ ಕೋಣಗಳೊಂದಿಗೆ ಅವುಗಳನ್ನು ಓಡಿಸುವಾತನ ಪಾತ್ರವೂ ಮುಖ್ಯ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತರಾಟೆ

ಕುಡಿಯುವ ನೀರು ಸರಬರಾಜು ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ...

news

ಫೆ.7 ರಿಂದ ರಾಜ್ಯದಲ್ಲಿ ದಡಾರ, ರುಬೆಲ್ಲಾ ಲಸಿಕೆ ಕಾರ್ಯಕ್ರಮ

ಫೆಬ್ರವರಿ 7 ರಿಂದ 28 ರವರೆಗೆ ರಾಜ್ಯಾದ್ಯಂತ 9 ತಿಂಗಳಿಂದ 15 ನೇ ವರ್ಷದವರೆಗಿನ ಮಕ್ಕಳಿಗೆ ದಡಾರ ಮತ್ತು ...

news

ಮತ್ತೆ ರಾಮಮಂದಿರ ಅಸ್ತ್ರವನ್ನು ಕೈಗೆತ್ತಿಕೊಂಡ ಬಿಜೆಪಿ

ಉತ್ತರ ಪ್ರದೇಶ ಚುನಾವಣೆ ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ...

news

ಹೆಣ್ಣಿನ ಮಾನಕ್ಕಿಂತ ಮತಮಾನ ದೊಡ್ಡದು: ಶರದ್ ಯಾದವ್‌ ನೀಡಿದ ಸ್ಪಷ್ಟನೆ ಏನು?

ಹೆಣ್ಣಿನ ಮಾನಕ್ಕಿಂತ ಮತಮಾನ ದೊಡ್ಡದು ಎಂದು ಹೇಳಿಕೆ ನೀಡಿ ವಿವಾದವನ್ನು ತಲೆಗೆಳೆದುಕೊಂಡಿದ್ದ ಶರದ್ ಯಾದವ್, ...

Widgets Magazine Widgets Magazine