ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಸಂಬಂಧ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ನಗರದಾದ್ಯಂತ ಹಮ್ಮಿಕೊಂಡಿರುವ ನಮ್ಮ ನಡೆ ಮತಗಟ್ಟೆಯ ಕಡೆ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಮುಖ್ಯ ಚುನಾವಣಾಧಿಕಾರಿಯಾದ ಮನೋಜ್ ಕುಮಾರ್ ಮೀನಾ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಜಕ್ಕೂರು ಬಡಾವಣೆಯ ನ್ಯೂ ಕೃಷ್ಣ ಸಾಗರ ಫುಡ್ ಕೋರ್ಟ್ ವೃತ್ತದಲ್ಲಿ ಚಾಲನೆ ನೀಡಿದರು.