ಜಮ್ಮುವಿನ ಯುವಕರನ್ನು ಭಾರತದ ವಿರುದ್ಧ ಎತ್ತಿಕಟ್ಟುತ್ತಿರುವ ಪಾಕಿಸ್ತಾನ– ರಾಜನಾಥ್ ಸಿಂಗ್

ಟೆಕಾನ್‍ಪುರ್, ಭಾನುವಾರ, 7 ಜನವರಿ 2018 (13:19 IST)

ಭಾರತದ ವಿರುದ್ಧ ಜಮ್ಮು ಮತ್ತು ಕಾಶ್ಮಿರದ ಯುವಕರನ್ನು ಎತ್ತಿಕಟ್ಟುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.
 
ಮಧ್ಯಪ್ರದೇಶದ ಗ್ವಾಲಿಯರ್‍ನ ಟೆಕಾನ್‍ಪುರ್‌ನಲ್ಲಿ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ್ದಾರೆ.
 
ಪಾಕಿಸ್ತಾನದಲ್ಲಿ ಭಯೋತ್ಪಾದಕರಿಗೆ ಮೂಲಸೌಕರ್ಯ ಅಭಿವೃದ್ದಿ ಮುಂದುವರಿದಿದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ಉಗ್ರರ ತರಬೇತಿ ಶಿಬಿರಗಳು ನಡೆಯುತ್ತಿವೆ. ಸಂವಹನ ಕೇಂದ್ರಗಳ ಸ್ಥಾಪನೆ ರೂಪದಲ್ಲಿ ಪಾಕಿಸ್ತಾನ ಭಯೋತ್ಪಾದನೆ ಮೂಲಸೌಕರ್ಯಕ್ಕೆ ಉತ್ತೇಜನ ಮುಂದುವರಿಸಿದೆ ಎಂದಿದ್ದಾರೆ.
 
ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರಿಗೆ ಹಣಕಾಸು ನೆರವು ಸೇರಿದಂತೆ ಎಲ್ಲ ರೀತಿಯ ಸಹಕಾರವನ್ನು ಪಾಕಿಸ್ತಾನ ನೀಡುತ್ತಿದೆ. ಧಾರ್ಮಿಕ ಸ್ಥಳಗಳಲ್ಲಿ ಗಲಭೆ ಮತ್ತು ಶಾಂತಿ ಕದಡುವ ಶಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಾವಿನ ಮನೆಯಲ್ಲಿ ರಾಜಕಾರಣ ಮಾಡಬಾರದು– ಸಿಎಂ

ಸಾವಿನ ಸಂದರ್ಭದಲ್ಲಿ ಶವದ ಮೇಲೆ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

news

ಬಿಜೆಪಿ ನಾಯಕರು ವಿಕೃತ ಮನೋಭಾವ ಬಿಡಲಿ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಿಜೆಪಿ ನಾಯಕರು ವಿಕೃತ ಮನೋಭಾವ ಬಿಡಬೇಕು ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಸಲಹೆ ...

news

ಹಿಂದು ಸಂಘಟನೆಗಳಿಂದಲೇ ಹತ್ಯೆಗಳಾಗುತ್ತಿವೆ: ಸಚಿವ ರಮಾನಾಥ್ ರೈ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳು ಹಿಂದು ಸಂಘಟನೆಗಳಿಂದಲೇ ...

news

ಬಶೀರ್ ಸಾವಿನ ಕುರಿತು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದು ಏನು ಗೊತ್ತಾ…?

ಮಂಗಳೂರು: ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಅಹಮ್ಮದ್ ಬಶೀರ್ ನಗರದ ಎ.ಜೆ. ಆಸ್ಪತ್ರೆಯಲ್ಲಿ ಇಂದು (ಭಾನುವಾರ) ...

Widgets Magazine
Widgets Magazine