ಪಾರ್ವತಮ್ಮ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು, ಬುಧವಾರ, 8 ಮಾರ್ಚ್ 2017 (15:10 IST)

Widgets Magazine

ಅನಾರೋಗ್ಯಕ್ಕೊಳಗಾಗಿ ನಿನ್ನೆ ತಡರಾತ್ರಿ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ವರನಟ ಡಾ.ರಾಜ್ ಕುಮಾರ್ ಪತ್ನಿ, ಪ್ರಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜಕುಮಾರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ಅವರನ್ನು ತೀವ್ರ ನಿಗಾ ಘಟಕದಿಂದ ಜನರಲ್ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.


 
 
ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗಿ, ರಕ್ತದೊತ್ತಡ ತಗ್ಗಿದ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಪುತ್ರ ರಾಘವೇಂದ್ರ ರಾಜಕುಮಾರ್ ತಮ್ಮ ತಾಯಿ ಪಾರ್ವತಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.
 
ನಿನ್ನೆ ರಾತ್ರಿಯೇ ವೈದ್ಯರು ಅವರಿಗೆ ವಿವಿಧ ಪರೀಕ್ಷೆಗಳನ್ನು ಮಾಡಿದ್ದು ತೀವ್ರ ನಿಗಾ ಘಟಕದಲ್ಲಿರಿಸಲಾಗಿತ್ತು.  ಡಾ. ಸಂಜಯ್ ಕುಲಕರ್ಣಿ ಅವರಿಗೆ ಚಿಕಿತ್ಸೆ ನೀಡಿದ್ದರು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಜನರಲ್ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ.
 
ಶಿವಣ್ಣ, ರಾಘವೇಂದ್ರ ರಾಜ್‍ಕುಮಾರ್ ಹಾಗೂ ಪುನೀತ್ ರಾಜ್‍ಕುಮಾರ್ ತಾಯಿ ಜೊತೆ ಆಸ್ಪತ್ರೆಯಲ್ಲಿದ್ದಾರೆ.
 
ಈ ಕುರಿತು ಪ್ರತಿಕ್ರಿಯಿಸಿರುವ ಶಿವಣ್ಣ ರಾತ್ರಿ ತಾಯಿ ಅವರಿಗೆ ಸುಸ್ತು ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದೆವು ಎಂದಿದ್ದಾರೆ.
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಹಿಳಾಶಕ್ತಿಗೆ ಜೈ ಎನ್ನಿ (ವಿಡಿಯೋ)

ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಭ್ರಮ. ಮಹಿಳೆಯರ ಉತ್ಥಾನ ಮತ್ತು ಸಬಲೀಕರಣ ಸಮಾಜದ ಬೆಳವಣಿಗೆಗೆ ...

news

ಶಾಸಕಿ ಮೋಟಮ್ಮ ಭೂ ಅಕ್ರಮದಲ್ಲಿ ಭಾಗಿ ಆರೋಪ

ಬೆಂಗಳೂರು: ಎಂಎಲ್‌ಸಿ ಮೋಟಮ್ಮ ಭೂ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ...

news

ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಬಿಎಸ್‌ವೈ ನಕಾರ

ಬೆಂಗಳೂರು: ಕಾಲಿಗೆ ಬೀಳುವುದು ವಿಕೃತಿ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ...

news

ದೆಹಲಿ ಹಿಟ್ ಆ್ಯಂಡ್ ರನ್ ಪ್ರಕರಣ: ಆರೋಪಿ ಬಂಧನ

ದೆಹಲಿಯಲ್ಲಿ ಕಳೆದ ಭಾನುವಾರ ರಾತ್ರಿ ನಡೆದ ಗುದ್ದೋಡು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ...

Widgets Magazine