ರಾಜ್ಯದ ಜನತೆಗೆ ಡಬಲ್ ಎಂಜಿನ್ ಸರ್ಕಾರದ ಅಗತ್ಯತೆ ಮತ್ತು ಅಭಿವೃದ್ಧಿ ಕೆಲಸಗಳ ವೇಗದ ಬಗ್ಗೆ ನಂಬಿಕೆ ಇದೆ. ಪ್ರಧಾನಿ ನರೇಂದ್ರ ಮೋದಿ ನಾಯತಕತ್ವ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.