ಧರ್ಮಸ್ಥಳಕ್ಕೆ ಆಗಮಿಸಿದ ಪ್ರಧಾನಿ: ಮಂಜುನಾಥ ದೇವರ ದರ್ಶನ ಪಡೆಯುತ್ತಿರುವ ಮೋದಿ

ಮಂಗಳೂರು, ಭಾನುವಾರ, 29 ಅಕ್ಟೋಬರ್ 2017 (11:36 IST)

Widgets Magazine

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿಶೇಷ ವಿಮಾನದ ಮೂಲಕ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.


ಪ್ರಧಾನಿ ಮೋದಿಯವರಿಗೆ ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದ ಗೌಡ ರೇಷ್ಮೆ ಶಾಲು, ಏಲಕ್ಕಿ ಮಾಲೆ, ಸಾಂಪ್ರದಾಯಿಕ ಮೈಸೂರು ಪೇಠ ತೊಡಿಸಿ ಸ್ವಾಗತಿಸಿದರು. ಇದೇವೇಳೆ ಸರ್ಕಾರದ ಪರವಾಗಿ ಸಚಿವ ಯು.ಟಿ.ಖಾದರ್, ಮಂಗಳೂರು ಮೇಯರ್ ಕವಿತಾ ಸನಿಲ್, ಗುಲಾಬಿ ಹೂ ನೀಡಿ ಸ್ವಾಗತ ಕೋರಿದರು.

ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಮೋದಿಯವರಿಗೆ ದೇವಾಲಯದ ಅರ್ಚಕರು ಪೂರ್ಣಕುಂಭ ಸ್ವಾಗತ ನೀಡಿದರು. ಇದೇವೇಳೆ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ಸಾಂಪ್ರದಾಯಿಕ ಉಡುಗೆಯನ್ನು ಪ್ರಧಾನಿಯವರಿಗೆ ನೀಡಲಾಯಿತು.

ಸದ್ಯ ದೇವಾಲಯದ ಪ್ರಾಂಗಣ ಪ್ರವೇಶಿಸಿರುವ ಪ್ರಧಾನಿ, ದೇವರ ಪೂಜೆಯಲ್ಲಿ ತಲ್ಲೀನರಾಗಿದ್ದಾರೆ. ಕಾರ್ತಿಕ ಮಾಸದಲ್ಲಿ ಶಿವನ ದರ್ಶನ ಅತ್ಯಂತ ಪ್ರಾಮುಖ್ಯತೆ ಪಡೆದಿದೆ. ಈ ನಿಟ್ಟಿನಲ್ಲಿ ಧರ್ಮಸ್ಥಳದಲ್ಲಿ ನಡೆಯುವ ಮಹಾಪೂಜೆಯ ಸಂದರ್ಭಕ್ಕೆ ಪ್ರಧಾನಿ ಆಗಮಿಸಿದ್ದಾರೆ. ಈ ಮೂಲಕ ಧರ್ಮಸ್ಥಳಕ್ಕೆ ಮೊದಲು ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆ ಪಾತ್ರರಾದರು.

ಮೋದಿಯವರು ದೇವಾಲಯದ ಆವರಣ ಪ್ರವೇಶಿಸುತ್ತಿದ್ದಂತೆ, ಕಿಕ್ಕಿರಿದು ನೆರಿದಿದ್ದ ಜನರತ್ತ ಕೈ ಬೀಸಿದರು. ಈ ಸಂದರ್ಭದಲ್ಲಿ ಮೋದಿ ಮೋದಿ ಘೋಷ ಮೊಳಗಿತು.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಪ್ಪು ಡ್ರೆಸ್ ತೊಟ್ಟವರಿಗೆ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಪ್ರವೇಶವಿಲ್ಲ

ಮಂಗಳೂರು: ಇಂದು ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುತ್ತಿರುವ ಧರ್ಮಸ್ಥಳ ...

news

ಪ್ರಧಾನಿ ಮೋದಿ ಆಗಮನಕ್ಕೆ ಕ್ಷಣಗಣನೆ: ಧರ್ಮಸ್ಥಳ-ಉಜಿರೆಯಲ್ಲಿ ಹೈ ಅಲರ್ಟ್

ಧರ್ಮಸ್ಥಳ: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಹಾಗೂ ...

news

ಪ್ರಧಾನಿ ಮೋದಿ ಆಗಮನ ಹಿನ್ನಲೆ: ಖುದ್ದು ತಯಾರಿ ಪರಿಶೀಲಿಸಿದ ಧರ್ಮಾಧಿಕಾರಿ

ಮಂಗಳೂರು: ಪ್ರಧಾನಿ ಮೋದಿ ಇಂದು ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾರ್ಯಕ್ರಮಗಳ ...

news

ಪ್ರಧಾನಿ ಮೋದಿ ಇಂದಿನ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸಾಥ್ ಕೊಡಲ್ಲ!

ಬೆಂಗಳೂರು: ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಹಲವು ಕಾರ್ಯಕ್ರಮಗಳಲ್ಲಿ ...

Widgets Magazine