ಕುಖ್ಯಾತ ರೌಡಿಶೀಟರ್ ಮೇಲೆ ಪೊಲೀಸ್ ಫೈರಿಂಗ್, ಆರೋಪಿ ಬಂಧನ

ಬೆಂಗಳೂರು, ಶನಿವಾರ, 21 ಅಕ್ಟೋಬರ್ 2017 (14:22 IST)

ಬೆಂಗಳೂರು: ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಸೋಲದೇವನಹಳ್ಳಿಯ ಆಚಾರ್ಯ ಕಾಲೇಜು ಬಳಿ ಕುಖ್ಯಾತ ರೌಡಿಯನ್ನ ಬಂಧಿಸಿದ್ದಾರೆ.


ಕುಖ್ಯಾತ ರೌಡಿಶೀಟರ್‌ ರಾಜುದೊರೆಯನ್ನು ಬಂಧಿಸಿದ್ದಾರೆ. ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ರೌಡಿ ಶೀಟರ್ ಪೊಲೀಸರ ಮೇಲೆಯೇ ಪ್ರತಿ ದಾಳಿ ನಡೆಸಿದ್ದಾನೆ. ಮುಖ್ಯಪೇದೆ ನರಸಿಂಹಮೂರ್ತಿಗೆ ಡ್ರ್ಯಾಗರ್‌ನಿಂದ ಇರಿದಿದ್ದಾನೆ. ಈ ವೇಳೆ ಆತ್ಮರಕ್ಷಣೆಗೆ ಇನ್ಸ್‌ಪೆಕ್ಟರ್‌ ಪ್ರಕಾಶ್‌ ರಾಥೋಡ್‌ ಗುಂಡು ಹಾರಿಸಿದ್ದಾರೆ. ಈ ಸಂದರ್ಭದಲ್ಲಿ ರಾಜುದೊರೆ ಎಡಗಾಲಿಗೆ ಗುಂಡು ತಗುಲಿದೆ.

ಪೇದೆ ನರಸಿಂಹ ಮೂರ್ತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ರಾಜುದೊರೆಯನ್ನು ವಶಕ್ಕೆ ಪಡೆದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಲದೇವನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ನಿನ್ನೆ(ಅ.20) ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ...

news

ಇಟಲಿ ಕನ್ನಡಕ ಧರಿಸಿ ಕೇದಾರನಾಥ ದರ್ಶನ: ಕಾಂಗ್ರೆಸ್ ಖಂಡನೆ

ನವದೆಹಲಿ: ಕೇದಾರನಾಥ ದೇಗುಲದ ಅಭಿವೃದ್ಧಿಗೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಹಂಕಾರದ ಮಾತನಾಡಿದ್ದಾರೆ ...

news

ಪ್ರಧಾನಿ ಮೋದಿ ಧರ್ಮಸ್ಥಳಕ್ಕೆ ಭೇಟಿ ನೀಡುವ ಮೊದಲು ಬೆಂಗಳೂರಿಗೆ

ಬೆಂಗಳೂರು: ಪ್ರಧಾನಿ ಮೋದಿ ಅಕ್ಟೋಬರ್ 29 ಕ್ಕೆ ದ.ಕ. ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ...

news

ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಸ್ಪತ್ರೆಗೆ ದಾಖಲು

ನವದೆಹಲಿ: ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅನಾರೋಗ್ಯ ಹಿನ್ನಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ...

Widgets Magazine
Widgets Magazine