Widgets Magazine

ಪ್ರಕಾಶ್ ರೈಗೆ ಶಿವರಾಮ ಕಾರಂತ ಪ್ರಶಸ್ತಿ: ಬಿಜೆಪಿ ತೀವ್ರ ವಿರೋಧ

ಬೆಂಗಳೂರು| Rajesh patil| Last Modified ಶುಕ್ರವಾರ, 6 ಅಕ್ಟೋಬರ್ 2017 (13:27 IST)
ಬಹುಭಾಷಾ ನಟ ಪ್ರಕಾಶ್ ರೈಗೆ ಪ್ರಶಸ್ತಿ ನೀಡುವುದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಪ್ರಕಾಶ್ ರೈ, ಗೌರಿ ಲಂಕೇಶ್ ಹತ್ಯೆ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಮೌನವಾಗಿದ್ದಾರೆ ಎಂದು ಟೀಕಿಸಿದ್ದಲ್ಲದೇ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
 
ಕುಣಿಗಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಪ್ರಕಾಶ್ ರೈಗೆ ಶಿವರಾಮ ಕಾರಂತ ಪ್ರಶಸ್ತಿ ನೀಡುವ ವಿಚಾರ ಸರಿಯಲ್ಲ. ಅವರೊಬ್ಬ ಅದ್ಭುತ ನಟ ಎನ್ನುವುದರಲ್ಲಿ ಅನುಮಾನವಿಲ್ಲ. ಆದರೆ, ಇವರು ಎಡಪಂಥೀಯದತ್ತ ವಾಲುತ್ತಿದ್ದಾರೆ ಎಂದು ಆರೋಪಿಸಿದರು.
 
ಪ್ರಕಾಶ್ ರೈ ಅವರ ಅಭಿಪ್ರಾಯಗಳು ಸಮಾಜಕ್ಕೆ ಮಾರಕವಾಗಿವೆ. ಪ್ರಶಸ್ತಿ ವಾಪಸ್ ನೀಡುವುದಾಗಿ ಹೇಳಿದ್ದಾರೆ. ಅಂತಹವರಿಗೆ ಪ್ರಶಸ್ತಿ ಪ್ರಧಾನ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :