ಪ್ರಧಾನಿ ಮೋದಿ ಐಟಿ ಆಸ್ತ್ರಕ್ಕೆ ಸಿಎಂ ಸಿದ್ದರಾಮಯ್ಯ ಎಸಿಬಿ ಪ್ರತ್ಯಸ್ತ್ರ?

ಬೆಂಗಳೂರು, ಗುರುವಾರ, 3 ಆಗಸ್ಟ್ 2017 (16:34 IST)

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆದಾಯ ತೆರಿಗೆ ಇಲಾಖೆ ದಾಳಿಯ ಅಸ್ತ್ರಕ್ಕೆ ಪ್ರತಿಯಾಗಿ ಎಸಿಬಿಯ ಪ್ರತ್ಯಸ್ತ್ರ ಬ್ರಹ್ಮಾಸ್ತ್ರ ಬಳಸುವ ರಣತಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. 
 
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ನಡೆದ ಐಟಿ ದಾಳಿಗೆ ಪ್ರತಿಯಾಗಿ ಬಿಜೆಪಿ ನಾಯಕರ ಮೇಲೆ ಎಸಿಬಿ ದಾಳಿ ನಡೆಸಲು ಸಿಎಂ ಸಿದ್ದರಾಮಯ್ಯ ರಣತಂತ್ರ ರೂಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.   
 
ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕೃತ ಕಾವೇರಿ ನಿವಾಸಕ್ಕೆ ಎಸಿಬಿ ಹಿರಿಯ ಅಧಿಕಾರಿಗಳನ್ನು ಚರ್ಚೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಎಸಿಬಿಯಲ್ಲಿ ದಾಖಲಾಗಿರುವ ಬಿಜೆಪಿ ನಾಯಕರುಗಳ ವಿರುದ್ಧದ ಪ್ರಕರಣಗಳ ಬಗ್ಗೆ ಚರ್ಚಿಸಲು ಇಂದು ಸಂಜೆ 5 ಗಂಟೆಗೆ ಸಿದ್ದರಾಮಯ್ಯ ಮಹತ್ವದ ಸಭೆ ಕರೆದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.   
 
ಬಿಜೆಪಿ ನಾಯಕರಿಗೆ ಶಾಕ್ ನೀಡಲು ಸಿಎಂ ಸಿದ್ದರಾಮಯ್ಯ ರಣತಂತ್ರ ರೂಪಿಸಿದ್ದು, ಬಿಜೆಪಿ ನಾಯಕರ ನಿವಾಸಗಳ ಮೇಲೆ ಎಸಿಬಿ ದಾಳಿ ನಡೆಸಲಿದೆಯೇ ಎನ್ನುವ ಬಗ್ಗೆ ಸಂಶಯ ಕಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಡಿಕೆಶಿಯ ವಿಧಾನಸೌಧದ ಕಚೇರಿ ಮೇಲೂ ದಾಳಿ..?

ನಿನ್ನೆ ಬೆಳಗ್ಗೆಯಿಂದ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ...

news

ಹಿಂದೂ ವಿದ್ಯಾರ್ಥಿಗಳಿಗೆ ನಮಾಜ ಮಾಡುವಂತೆ ಒತ್ತಾಯಿಸಿದ ಶಿಕ್ಷಕರು

ಮೆವಾತ್: ನಗರದ ಶಾಲೆಯ ಶಿಕ್ಷಕರು ಹಿಂದು ವಿದ್ಯಾರ್ಥಿಗಳಿಗೆ ನಮಾಜ್ ಮಾಡುವಂತೆ ಒತ್ತಡ ಹೇರುತ್ತಿರುವ ...

news

ರಾಜಕೀಯ ಪ್ರೇರಿತ ದಾಳಿ ವಿರೋಧಿಸಿ ಜನಾಂದೋಲನ: ಸಿಎಂ

ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮೇಲಿನ ಐಟಿ ದಾಳಿ ವಿರೋಧಿಸಿ ಜನಾಂದೋಲನ ನಡೆಸಲಾಗುವುದು ಎಂದು ...

news

ಐಟಿ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಲು ಯತ್ನಿಸಿದ ಡಿಕೆಶಿ ಜ್ಯೋತಿಷಿ

ಬೆಂಗಳೂರು: ಐಟಿ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಲು ಡಿಕೆಶಿ ಜ್ಯೋತಿಷಿ ದ್ವಾರಕನಾಥ್ ಯತ್ನಿಸಿದ ಘಟನೆ ...

Widgets Magazine