ಪ್ರಧಾನಿ ಮೋದಿಯದ್ದು ಬಾಯಿಬಾಡಾಯಿ ಸಾಧನೆ ಶೂನ್ಯ: ಸಿಎಂ ವಾಗ್ದಾಳಿ

ರಾಯಚೂರು, ಶನಿವಾರ, 12 ಆಗಸ್ಟ್ 2017 (15:03 IST)

ಪ್ರಧಾನಮಂತ್ರಿ ಮೋದಿಯದ್ದು ಬಾಯಿಬಾಡಾಯಿ ಸಾಧನೆ ಮಾತ್ರ ಶೂನ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ನಂತರ ದೇಶದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಅಚ್ಚೇ ದಿನ್‌ಗಾಗಿ ಜನತೆ ಇನ್ನೂ ಕಾಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
 
ಕಾಂಗ್ರೆಸ್ ಪಕ್ಷದವರನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿವೆ. ವಿಪಕ್ಷಗಳನ್ನು ವ್ಯವಸ್ಥಿತವಾಗಿ ತುಳಿಯುವ ಷಡ್ಯಂತ್ರ ನಡೆಯುತ್ತಿದೆ. ನೋಟ್‌ಬ್ಯಾನ್ ಮಾಡಿ ದೇಶದ ಆರ್ಥಿಕ ವ್ಯವಸ್ಥೆಯನ್ನು ಹದಗೆಡಿಸಿದ್ದಾರೆ ಎಂದು ಗುಡುಗಿದರು.
 
ಕೇಂದ್ರ ಸರಕಾರದ ನೀತಿಗಳು ದೇಶಕ್ಕೆ ಮಾರಕವಾಗಿವೆ. ಯುಪಿಎ ಸರಕಾರದ ಸಾಧನೆಗಳನ್ನು ಜಾರಿಗೊಳಿಸಿ ಎನ್‌ಡಿಎ ಸರಕಾರ ತಮ್ಮದೇ ನೀತಿಗಳು ಎಂದು ಬಿಂಬಿಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.
 
ಸಚಿವ ಸಂಪುಟದಲ್ಲಿ ಖಾಲಿಯಾಗಿರುವ ಮೂರು ಸ್ಥಾನಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು. ಸಮಾವೇಶ ಮುಗಿದ ನಂತರ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ನರೇಂದ್ರ ಮೋದಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಬಿಜೆಪಿ ರಾಹುಲ್ ಗಾಂಧಿ Congress Bjp Rahul Gandhi Narendra Modi Cm Siddaramaiah

ಸುದ್ದಿಗಳು

news

ಯಾರೇ ಬಂದ್ರೂ ನಮ್ದೇ ಗೆಲುವು: ಅಮಿತ್ ಶಾಗೆ ಸಿಎಂ ಟಾಂಗ್

ರಾಯಚೂರು: ಯಾರೇ ಬಂದ್ರೂ ನಮ್ದೇ ಗೆಲುವು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ...

news

ರೈತರಿಗೆ 24 ಗಂಟೆ ವಿದ್ಯುತ್ ಪೂರೈಸಲು ಸಾಧ್ಯವಿಲ್ಲ: ಸಚಿವ ಡಿ.ಕೆ.ಶಿವಕುಮಾರ್

ರಾಯಚೂರು: ರಾಜ್ಯದ ರೈತರಿಗೆ 24 ಗಂಟೆ ವಿದ್ಯುತ್ ಪೂರೈಸಲು ಸಾಧ್ಯವಿಲ್ಲ ಎಂದು ಇಂಧನ ಖಾತೆ ಸಚಿವ ...

news

ಭ್ರಷ್ಟ ಸರಕಾರವನ್ನು ಕಿತ್ತೊಗೆಯಿರಿ: ಸಿಎಂ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವಂತೆ ...

news

ಚೆನ್ನೈ-ಬೆಂಗಳೂರು ಕೆಎಸ್ ಆರ್ ಟಿಸಿ ಬಸ್ ಗೆ ಬೆಂಕಿ

ಚೆನ್ನೈ: ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಐರಾವತ ಬಸ್ ನಲ್ಲಿ ಚೆನ್ನೈ ಸಮೀಪ ...

Widgets Magazine