ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಅಂದ್ರೆ ಭಯ : ಮೊಯ್ಲಿ

ಬೆಂಗಳೂರು, ಸೋಮವಾರ, 18 ಸೆಪ್ಟಂಬರ್ 2017 (19:19 IST)

ಪ್ರಧಾನಿ ನರೇಂದ್ರ ಮೋದಿಗೆ ಹಗಲು ಕನಸಿನಲ್ಲಿಯೂ ರಾಹುಲ್ ಗಾಂಧಿ ಪ್ರಧಾನಮಂತ್ರಿಯಾದಂತೆ ಕಾಣುತ್ತಾರೆ. ಅದಕ್ಕೆ ರಾಹುಲ್ ಅಂದರೆ, ಮೋದಿಯವರಿಗೆ ಭಯವಾಗುತ್ತದೆ ಎಂದು ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ, ಗುಜರಾತ್ ಸೇರಿ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳ ಬಳಿಕ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಲಿದ್ದಾರೆ ಎಂದು ತಿಳಿಸಿದ್ದಾರೆ.
 
ಮುಂಬರುವು ಡಿಸೆಂಬರ್ ತಿಂಗಳಲ್ಲಿ ಮತ್ತು ಮುಂದಿನ ವರ್ಷದ ಆರಂಭದಲ್ಲಿ ಗುಜರಾತ್ ಮತ್ತು ಕರ್ನಾಟಕ ರಾಜ್ಯಗಳಲ್ಲಿ ವಿಧಾನಸಭೆಗೆ ಚುನಾವಣೆಗಳು ನಡೆಯಲಿವೆ. ಚುನಾವಣೆ ಫಲಿತಾಂಶದ ನಂತರ ರಾಹುಲ್ ಅಧ್ಯಕ್ಷ ಸ್ಥಾನಕ್ಕೆ ಏರುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
 
ಚುನಾವಣೆ ನಂತರ ನಡೆಯಲಿರುವ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸ್ಪರ್ಧಿಸಿ ಪಾರದರ್ಶಕವಾಗಿ ಆಯ್ಕೆಯಾಗಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಸಂಸದ ವೀರಪ್ಪ ಮೊಯ್ಲಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಭ್ರಷ್ಟಾಚಾರದ ಹೇಳಿಕೆ ನೀಡಲು ಬಿಎಸ್‌ವೈಗೆ ನೈತಿಕತೆಯಿಲ್ಲ: ಉಗ್ರಪ್ಪ

ಬೆಂಗಳೂರು: ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಯಾವುದೇ ...

news

ಪ್ರತಿವರ್ಷದಂತೆ ಧಾರ್ಮಿಕ ಕೈಂಕರ್ಯ ನಡೆಯುತ್ತವೆ: ಪ್ರಮೋದಾ ದೇವಿ ಒಡೆಯರ್

ಮೈಸೂರು: ಪ್ರತಿ ವರ್ಷದಂತೆ ಈ ಬಾರಿಯೂ ಅರಮನೆಯಲ್ಲಿ ಧಾರ್ಮಿಕ ಕೈಂಕರ್ಯಗಳು ಮುಂದುವರೆಯುತ್ತವೆ ಎಂದು ...

news

ಭಯೋತ್ಪಾದನೆ ತರಬೇತಿ ನೀಡಲು ಬಂದಿದ್ದ ಅಲ್`ಖೈದಾ ಉಗ್ರ ಅರೆಸ್ಟ್

ಮಯನ್ಮಾರ್`ನಿಂದ ಭಾರತಕ್ಕೆ ಅಕ್ರಮವಾಗಿ ನುಸುಳಿರುಚ ರೊಹಿಂಗ್ಯಾ ನಿರಾಶ್ರಿತರಿಗೆ ತರಬೇತಿ ನೀಡಲು ಭಾರತಕ್ಕೆ ...

news

ದೇಶದಲ್ಲಿ ತುರ್ತುಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಿದೆ: ಮಾಯಾವತಿ

ಲಕ್ನೋ: ದೇಶದಲ್ಲಿ ತುರ್ತುಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿ ಎದುರಾಗಿದೆ ಎಂದು ಮಾಜಿ ಸಿಎಂ ಮಾಯಾವತಿ ...

Widgets Magazine
Widgets Magazine