ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿ ಸಮುದ್ರಮಟ್ಟದಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯದಿಂದ ರಾಜ್ಯದಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿವೆ.