Widgets Magazine
Widgets Magazine

ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯದ ಅಭಿವೃದ್ಧಿ: ಕುಮಾರಸ್ವಾಮಿ

ಬೆಂಗಳೂರು, ಭಾನುವಾರ, 16 ಏಪ್ರಿಲ್ 2017 (15:13 IST)

Widgets Magazine

ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯದ ಅಭಿವೃದ್ಧಿಯಾಗಲಿದೆ. ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ರಾಷ್ಟ್ರೀಯ ಪಕ್ಷಗಳಿಗೆ ಅಧಿಕಾರಕ್ಕೆ ಬರಲು ಮಾತ್ರ ರಾಜ್ಯ ಬೇಕಾಗುತ್ತದೆ. ಅಧಿಕಾರಕ್ಕೆ ಬಂದ ನಂತರ ರಾಜ್ಯದ ಹಿತಾಸಕ್ತಿಯನ್ನು ಕಡೆಗೆಣಿಸುತ್ತವೆ. ನೆರೆಯ ರಾಜ್ಯಗಳಲ್ಲಿ ಅಲ್ಲಿನ ಜನತೆ ಪ್ರಾದೇಶಿಕ ಪಕ್ಷಗಳನ್ನು ಆಯ್ಕೆ ಮಾಡಿಕೊಂಡಿದ್ದರಿಂದ ಅಭಿವೃದ್ಧಿ ಸಾಧ್ಯವಾಗಿದೆ ಎಂದರು.
 
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಪೂರ್ಣಾವಧಿಯ ಅಧಿಕಾರ ನೀಡಿದ್ದೀರಿ. ಅದರಂತೆ, ಒಂದು ಬಾರಿ ಜೆಡಿಎಸ್ ಪಕ್ಷಕ್ಕೆ ಅವಕಾಶ ಕೊಟ್ಟಲ್ಲಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ತಿಳಿಸಿದ್ದಾರೆ.  
 
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜೆಡಿಎಸ್ ಪಕ್ಷಕ್ಕೆ ವ್ಯಾಪಕ ಬೆಂಬಲ ದೊರೆಯುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಅತ್ಯಧಿಕ ಕ್ಷೇತ್ರಗಳನ್ನು ಗೆಲ್ಲುವ ಪ್ರಯತ್ನ ಮಾಡುತ್ತೇವೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಪ್ರಾಮಾಣಿಕ ಸೇವೆ ಮಾಡಿದ್ದೇನೆ. ಬಡವರು, ಶೋಷಿತರಿಗೆ ಹೆಚ್ಚಿನ ನೆರವು ನೀಡಿರುವುದು ಮರೆಯಬಾರದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಕುಮಾರಸ್ವಾಮಿ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ದೇವೇಗೌಡ Kumarswamy Jds Congress Bjp Devegowda

Widgets Magazine

ಸುದ್ದಿಗಳು

news

ಬರಗಾಲ: ರಾಜ್ಯದ ರೈತರಿಗೆ ಮನವಿ ಮಾಡಿದ ಸಚಿವ ಎಂ.ಬಿ.ಪಾಟೀಲ್

ಆಲಮಟ್ಟಿ: ರಾಜ್ಯದಲ್ಲಿ ಭೀಕರ ಬರಗಾಲವಿರುವುದರಿಂದ ರೈತರು ಜಮೀನಿಗೆ ನೀರು ಬೇಕು ಎಂದು ಹಟಹಿಡಿಯಬಾರದು ಎಂದು ...

news

ಕೆಪಿಸಿಸಿಗೆ ನೂತನ ಸಾರಥಿ ಆಯ್ಕೆಗೆ ಹೈಕಮಾಂಡ್ ಕಸರತ್ತು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಹೊಸ ಅಧ್ಯಕ್ಷರ ...

news

ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆಯಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಅಡಳಿತ ವಿರೋಧಿ ಅಲೆಯಿಲ್ಲ. ಹಿಂದುತ್ವದ ಧ್ರುವಿಕರಣ ಸಾಧ್ಯವಿಲ್ಲ ಎಂದು ಸಿಎಂ ...

news

ಮುಂಬೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ಮುಂಬೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಭಾರಿ ಭದ್ರತೆಯನ್ನು ...

Widgets Magazine Widgets Magazine Widgets Magazine