ಮಂಗಳೂರು: ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಆರ್ ಎಸ್ಎಸ್ ಕಾರ್ಯಕರ್ತ ಶರತ್ ಶುಕ್ರರವಾರ ರಾತ್ರಿ ಸಾವನ್ನಪ್ಪಿದ್ದಾರೆ. ಇದರಿಂದ ಮತ್ತೆ ಬಂಟ್ವಾಳ ತಾಲೂಕಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಶರತ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಜೀವನ್ಮರಣ ಸ್ಥಿತಿಯಲ್ಲಿದ್ದ ಶರತ್ ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದರಿಂದ ರೊಚ್ಚಿಗೆದ್ದ ಆರ್ ಎಸ್ಎಸ್ ಕಾರ್ಯಕರ್ತರು ನಿಷೇಧಾಜ್ಞೆಯನ್ನು ಲೆಕ್ಕಿಸದೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.ಈ ನಡುವೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಂಸದ ನಳಿನ್ ಕುಮಾರ್ ಕಟೀಲ್ ರನ್ನು