ಬೆಂಗಳೂರು-ಮಂಗಳೂರು ರಸ್ತೆ ಬಂದ್! ಬದಲಿ ಮಾರ್ಗ ಯಾವುದು?

ಮಂಗಳೂರು, ಬುಧವಾರ, 15 ಆಗಸ್ಟ್ 2018 (11:12 IST)

ಮಂಗಳೂರು: ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಬೆಂಗಳೂರು ಮತ್ತು ಮಂಗಳೂರು ನಡುವಿನ ಸಂಪರ್ಕ ರಸ್ತೆ ಬಂದ್ ಆಗಿದೆ.
 
ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದ ಪರಿಣಾಮ ರಸ್ತೆ ಬಂದ್ ಮಾಡಲು ಡಿಸಿ ಶಶಿಕಾಂತ್ ಸೆಂಥಿಲ್ ಆದೇಶ ನೀಡಿದ್ದಾರೆ. ಇಲ್ಲಿ ನಿನ್ನೆ ರಾತ್ರಿ ಮಣ್ಣು ತೆರವುಗೊಳಿಸಲಾಗಿತ್ತು. ಈಗ ಮತ್ತೆ ಗುಡ್ಡ ಕುಸಿದ ಪರಿಣಾಮ ತೆರವು ಕಾರ್ಯಾಚರಣೆ ನಡೆಯುವವರೆಗೆ ರಸ್ತೆ ಬಂದ್ ಮಾಡಲು ಡಿಸಿ ಆದೇಶಿಸಿದ್ದಾರೆ. ಇದರಿಂದಾಗಿ ಮಡಿಕೇರಿ, ಸಂಪಾಜೆ, ಶಿರಾಡಿ ಘಾಟ್ ಮೂಲಕ ಮಂಗಳೂರಿಗೆ ಸಂಪರ್ಕ ರದ್ದಾಗಿದೆ.
 
ಇನ್ನು ಮಂಗಳೂರಿಗೆ ತೆರಳುವ ಪ್ರಯಾಣಿಕರು ಚಾರ್ಮಾಡಿ ಘಾಟ್ ಸಾಗಬೇಕಿದೆ. ಶಿರಾಡಿ ಘಾಟಿ ಬಂದ್ ಆಗಿದ್ದ ಸಂದರ್ಭದಲ್ಲಿ ಚಾರ್ಮಾಡಿ ಘಾಟಿ ಮೂಲಕವೇ ಮಂಗಳೂರಿಗೆ ವಾಹನ ಸಂಚರಿಸುತ್ತಿತ್ತು. ಇತ್ತೀಚೆಗಷ್ಟೇ ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತವಾಗಿತ್ತು. ಆದರೆ ಮಳೆಯಿಂದಾಗಿ ಮತ್ತೆ ಈ ರಸ್ತೆ ಬಂದ್ ಆಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿಯಿಂದ ಇಂದು ಭಾಷಣದ ದಾಖಲೆ

ನವದೆಹಲಿ: ತಮ್ಮ ಈ ಸರ್ಕಾರದ ಅವಧಿಯ ಕೊನೆಯ ಸ್ವಾತಂತ್ರ್ಯೋತ್ಸವ ಭಾಷಣ ಮಾಡಿದ ಪ್ರಧಾನಿ ಮೋದಿ ಹೊಸ ...

news

ಮಾನವೀಯ ಮುಖವುಳ್ಳ ಸರ್ಕಾರ ನಮ್ಮದು- ಸಿ ಎಂ ಕುಮಾರಸ್ವಾಮಿ

ಬೆಂಗಳೂರು : ದೇಶದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ...

news

ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಮನವಿ ಮಾಡಿದ ಸಿಎಂ ಕುಮಾರಸ್ವಾಮಿ

ಬೆಂಗಳೂರು : ದೇಶದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ...

news

ಸ್ವಾತಂತ್ರ್ಯೋತ್ಸವದಂದು ಸಿಎಂ ಕುಮಾರಸ್ವಾಮಿ ಮಾಣಿಕ್ ಷಾ ಮೈದಾನದಲ್ಲಿ ಹೇಳಿದ್ದೇನು?

ಬೆಂಗಳೂರು : ದೇಶದ 72 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಿಎಂ ಕುಮಾರಸ್ವಾಮಿ ಅವರು ಬೆಂಗಳೂರಿನ ಮಾಣಿಕ್ ಷಾ ...

Widgets Magazine