ಬೆಂಗಳೂರು: ಕಳೆದ ಒಂದು ತಿಂಗಳಿಂದ 14,500 ಅತಿಥಿ ಉಪನ್ಯಾಸಕರು ಸಾಕಷ್ಟು ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯಸರ್ಕಾರ ಇದೀಗ ಅಷ್ಟೂ ಉಪನ್ಯಾಸಕರನ್ನು ವಜಾ ಮಾಡುವ ಮೂಲಕ ಶಾಕ್ ಟ್ರೀಟ್ಮೆಂಟ್ ನೀಡಿದೆ. ಕಳೆದ ಒಂದು ತಿಂಗಳಿಂದ ತರಗತಿ ಬಹಿಷ್ಕರಿಸಿ ಅತಿಥಿ ಉಪನ್ಯಾಸಕರು ಮುಷ್ಕರ ನಡೆಸುತ್ತಿದ್ದರು.