ಬಿಜೆಪಿ ಪರಿವರ್ತನಾ ಯಾತ್ರೆಯ ಮೆರವಣಿಗೆಯಲ್ಲಿ ಪಾಲ್ಗೊಳ್ಳದ ಎಸ್.ಎಂ.ಕೃಷ್ಣ

ಮಂಡ್ಯ, ಶುಕ್ರವಾರ, 19 ಜನವರಿ 2018 (13:25 IST)

ಬಿಜೆಪಿ ಪರಿವರ್ತನಾ ಯಾತ್ರೆ ಜಿಲ್ಲೆಯ ಮದ್ದೂರಿನ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಅವರು ಮೆರವಣಿಗೆಯಲ್ಲಿ ಪಾಲ್ಗೊಳ್ಳದೆ ಕಾರ್ಯಕರ್ತರಿಗೆ ನಿರಾಸೆ ಮೂಡಿಸಿದ್ದಾರೆ.

ತೆರದ ವಾಹನದಲ್ಲಿ ಮೆರವಣಿಗೆ ನಡೆಸಲು ಎಲ್ಲ ಸಿದ್ದತೆ ಮಾಡಿಕೊಂಡು ಗಂಟೆಗಳ ಕಾಲ ಕಾರ್ಯಕರ್ತರು ಕಾಯುತ್ತಿದ್ದರು. ಆದರೆ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಮೆರವಣಿಗೆಯಲ್ಲಿ ಪಾಲ್ಗೊಂಡಿಲ್ಲ.

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇಲ್ಲದೆ ಪರಿವರ್ತನಾ ಯಾತ್ರೆ ನಡೆಸಲಾಗಿದ್ದು, ಈ ಇಬ್ಬರೂ ನಾಯಕರು ನೇರವಾಗಿ ವೇದಿಕೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಆದರೆ, ಮೆರವಣಿಗೆಯಲ್ಲಿ ಪಾಲ್ಗೊಳ್ಳದೆ ಎಸಿ ಹೋಟಲಿನಲ್ಲಿ ತಿಂಡಿ ತಿನ್ನುತ್ತಾ ಕುಳಿತಿದ್ದರು ಎನ್ನಲಾಗಿದೆ.

ಮೆರವಣಿಗೆಯಲ್ಲಿ ಈ ನಾಯಕರು ಭಾಗವಹಿಸದಿರುವುದು ಸ್ವಲ್ಪ ಮಟ್ಟಿಗೆ ಕಾರ್ಯಕರ್ತರಿಗೆ ನಿರಾಸೆ ಮೂಡಿಸಿದೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ ಸೇರುವ ಬೆಳವಣಿಗೆ ನಡೆದಿಲ್ಲ- ಆನಂದಸಿಂಗ್ ಸ್ಪಷ್ಟನೆ

ಕಾಂಗ್ರೆಸ್ ಸೇರುವ ಬಗ್ಗೆ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಹೊಸಪೇಟೆ ಬಿಜೆಪಿ ಶಾಸಕ ಆನಂದಸಿಂಗ್ ...

news

ಸಿದ್ದರಾಮಯ್ಯಗೆ ಮೈಸೂರು ವಿವಿಯಿಂದ ಡಾಕ್ಟರೇಟ್ ನೀಡಲು ಶಿಫಾರಸು

ಮೈಸೂರು ವಿಶ್ವ ವಿದ್ಯಾಲಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಾಕ್ಟರೇಟ್ ನೀಡುವಂತೆ ಸಿಂಡಿಕೇಟ್ ...

news

ಪಕ್ಷ ಬಯಸಿದರೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ- ಬಿ.ವೈ.ರಾಘವೇಂದ್ರ

ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷ ಬಯಸಿದರೆ ಸ್ಪರ್ಧೆ ಮಾಡಲಾಗುವುದು ಎಂದು ಬಿ.ಎಸ್.ಯಡಿಯೂರಪ್ಪ ಪುತ್ರ ...

news

ಮೌಢ್ಯ ಆಚರಣೆ ಮಾಡಿದರೆ ಜೈಲುಶಿಕ್ಷೆ – ರಾಜ್ಯ ಸರ್ಕಾರದ ಘೋಷಣೆ

ಬೆಂಗಳೂರು : ಮೌಢ್ಯ ಆಚರಣೆ ಮಾಡಿದವರ ವಿರುದ್ಧ ಕಠಿಣ ಕ್ರಮ ವಿಧಿಸುವುದಾಗಿ ರಾಜ್ಯ ಸರ್ಕಾರ ಘೋಷಣೆ ...

Widgets Magazine
Widgets Magazine