ಡಿಕೆಶಿಗೆ ಅಭಿನಂದನೆ ಸಲ್ಲಿಸಿದ ಸೋನಿಯಾ ಗಾಂಧಿ, ಅಹ್ಮದ್ ಪಟೇಲ್

ನವದೆಹಲಿ, ಬುಧವಾರ, 9 ಆಗಸ್ಟ್ 2017 (10:03 IST)

ಕುದುರೆ ವ್ಯಾಪಾರ, ರೆಸಾರ್ಟ್ ರಾಜಕಾರಣ ಎಲ್ಲ ಪ್ರಹಸನಗಳು ಮುಗಿದು ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ಪಟೇಲ್ ಗೆಲುವು ಸಾಧಿಸಿದ್ದಾರೆ. ಗುಜರಾತ್ ಶಾಸಕರು ಕು ದುರೆ ವ್ಯಾಪಾರದ ಭೀತಿಯಲ್ಲಿದ್ದಾಗ ಶಾಸಕರಿಗೆ ರಕ್ಷಣೆ ನೀಡಿ ಪಕ್ಷಕ್ಕೆ ನೆರವಾದ ಸಚಿವ ಡಿ.ಕೆ. ಶಿವಕುಮಾರ್`ಗೆ ಸೋನಿಯಾ ಗಾಂಧಿ ಮತ್ತು ಅಹ್ಮದ್ ಪಟೇಲ್ ಅಭಿನಂದನೆ ಸಲ್ಲಿಸಿದ್ದಾರೆ.


ಡಿ.ಕೆ. ಶಿವಕುಮಾರ್ ಅವರಿಗೆ ಕರೆ ಮಾಡಿದ್ದ ಸೋನಿಯಾ ಗಾಂಧಿ ಅಭಿನಂದನೆ ಸಲ್ಲಿಸಿದ್ದಾರೆ. ದೂರವಾಣಿ ಕರೆ ಮಾಡಿದ್ದ ಸೋನಿಯಾ ಗಾಂಧಿ, ಕಷ್ಟದ ಸಂದರ್ಭದಲ್ಲಿ ಪಕ್ಷಕ್ಕೆ ನೆರವಾಗಿದ್ದೀರಿ. ಉತ್ತಮ ಕೆಲಸ ಮಾಡಿದ್ದೀರಿ. ಅಹ್ಮದ್ ಪಟೇಲ್ ಗೆಲುವಿನ ಶ್ರೇಯ ನಿಮಗೂ ಸಲ್ಲಬೇಕು. ಕಿರುಕುಳವನ್ನ ಸಹಿಸಿ ಪಕ್ಷದ ಪರ ನಿಂತಿದ್ದೀರಿ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

 ಇತ್ತ, ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಹ್ಮದ್ ಪಟೇಲ್ ಸಹ ಡಿ.ಕೆ. ಶಿವಕುಮಾರ್ ಅವರಿಗೂ ಕರೆ ಮಾಡಿ ಧನ್ಯವಾದ ಹೇಳಿದ್ದಾರೆ. ತನ್ನ ಗೆಲುವಿಗೆ ಸಹಕರಿಸಿದ್ದಕ್ಕೆ ಆಭಾರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 ಇದರಲ್ಲಿ ಇನ್ನಷ್ಟು ಓದಿ :  
ಸೋನಿಯಾ ಗಾಂಧಿ ಅಹ್ಮದ್ ಪಟೇಲ್ ಕಾಂಗ್ರೆಸ್ Congress Ahmedh Patel Sonia Gandhi

ಸುದ್ದಿಗಳು

news

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ‘ನಾಪತ್ತೆ’!

ಅಮೇಠಿ: ಕಾಂಗ್ರೆಸ್ ಉಪಾಧ್ಯಕ್ಷ ಅಮೇಠಿ ಸಂಸದ ರಾಹುಲ್ ಗಾಂಧಿ ನಾಪತ್ತೆಯಾಗಿದ್ದಾರೆ! ಹೀಗಂತ ಅವರ ಸಂಸದೀಯ ...

news

ಹೈಕಮಾಂಡ್`ನಿಂದ ಡಿ.ಕೆ. ಶಿವಕುಮಾರ್`ಗೆ ಭರ್ಜರಿ ಗಿಫ್ಟ್..?

ರಾಜ್ಯಸಭೆ ಚುನಾವಣೆಯ ಕುದುರೆ ವ್ಯಾಪಾರದಿಂದ ಪಾರಾಗಲು ರಾಜ್ಯಕ್ಕೆ ಬಂದ ಗುಜರಾತ್`ನ 44 ಕಾಂಗ್ರೆಸ್ ...

news

‘ರಾಹುಲ್ ಗಾಂಧಿ ವಿದೇಶಕ್ಕೆ ರಹಸ್ಯವಾಗಿ ಹೋಗುವುದೇಕೆ?’

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿದೇಶಕ್ಕೆ ಹೋಗುವಾಗ ಯಾಕೆ ಭದ್ರತಾ ಸಿಬ್ಬಂದಿಗಳನ್ನು ...

news

ರಾಜ್ಯಸಭಾ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಭೇರಿ: ಅಮಿತ್ ಶಾಗೆ ಮುಖಭಂಗ

ನಿನ್ನೆ ದಿನಪೂರ್ತಿ ನಡೆದ ಗುಜರಾತ್ ರಾಜ್ಯಸಭೆ ಚುನಾವಣೆಯ ಮೇಲಾಟಗಳ ಬಳಿಕ ಸೋನಿಯಾ ಗಾಂಧಿ ರಾಜಕೀಯ ...

Widgets Magazine