ರಾಜ್ಯಕ್ಕೆ ಬರುವ ಪ್ರಧಾನಿ ಮೋದಿ ಜತೆ ಬಿಜೆಪಿ ನಾಯಕರ ಮೀಟಿಂಗ್

ಬೆಂಗಳೂರು, ಶನಿವಾರ, 28 ಅಕ್ಟೋಬರ್ 2017 (10:09 IST)

ಬೆಂಗಳೂರು: ನಾಳೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಆ ಬಳಿಕ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕರು ಮೋದಿ ಜತೆ ಮಾತುಕತೆ ನಡೆಸಲಿದ್ದಾರೆ.


 
ಮುಂಬರುವ ಚುನಾವಣಾ ಸಿದ್ಧತೆಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಪ್ರಧಾನಿ ಜತೆ ಚರ್ಚೆ ನಡೆಸಲಿದ್ದಾರೆಂದು ಹೇಳಲಾಗಿದೆ. ಆದರೆ ಯಾವಾಗ, ಎಲ್ಲಿ ಎಂದು ಇನ್ನೂ ಸಮಯ, ಸ್ಥಳ ನಿಗದಿಯಾಗಿಲ್ಲ ಎನ್ನಲಾಗಿದೆ.
 
ಪರಿವರ್ತನಾ ರ್ಯಾಲಿ, ಚುನಾವಣಾ ಸಿದ್ಧತೆಗಳ ಬಗ್ಗೆ ಪ್ರಧಾನಿ ಮೋದಿ ಜತೆ ಬಿಜೆಪಿ ನಾಯಕರು ಸಲಹೆ ಪಡೆಯಲಿದ್ದಾರೆ.  ನಾಳೆ ರಾಜ್ಯಕ್ಕೆ ಆಗಮಿಸಲಿರುವ ಮೋದಿ ಭೇಟಿ ಬಳಿಕ, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸೌಂದರ್ಯ ಲಹರಿ ಪಾರಾಯಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಬೀದರ್ ನಲ್ಲಿ ರೈಲ್ವೇ ಮಾರ್ಗ ಉದ್ಘಾಟಿಸಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೆಜೆ ಜಾರ್ಜ್ ರಾಜೀನಾಮೆ ನೀಡಬೇಕಾಗಿಲ್ಲ ಎಂದ ಎಚ್ ಡಿಕೆ

ಬೆಂಗಳೂರು: ಡಿವೈಎಸ್ ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ ಐಆರ್ ದಾಖಲಿಸಿದ ...

news

ಮಹಾರಾಷ್ಟ್ರದಲ್ಲಿ ಎನ್ ಸಿಪಿ ಜತೆ ಬಿಜೆಪಿ ಮೈತ್ರಿ..?

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ಹಾಗೂ ಬಿಜೆಪಿ ಮಧ್ಯೆ ವಾಕ್ ಸಮರ ತಾರಕಕ್ಕೇರಿದೆ. ಬಿಜೆಪಿ ಜತೆಗೆ ...

news

ಎಲ್ಲಾ ಸಮಯದಲ್ಲೂ ಭ್ರಷ್ಟರನ್ನು ರಕ್ಷಿಸಲು ಸಾಧ್ಯವಿಲ್ಲ: ಸಿಎಂಗೆ ಜಾವ್ಡೇಕರ್ ತಿರುಗೇಟು

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಲೇಬೇಕು ಎಂದು ...

news

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದಿಂದ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ...

Widgets Magazine
Widgets Magazine