ಮಠಗಳ ವಿರೋಧಕ್ಕೆ ಬೆಚ್ಚಿದ ಸರ್ಕಾರ: ಮಹಾಮಸ್ತಕಾಭಿಷೇಕ ವೇದಿಕೆಯಲ್ಲೇ ಕಾಂಗ್ರೆಸ್ ಶಾಸಕರಿಗೆ ಛೀಮಾರಿ?!

ಬೆಂಗಳೂರು, ಶುಕ್ರವಾರ, 9 ಫೆಬ್ರವರಿ 2018 (09:04 IST)

ಬೆಂಗಳೂರು: ಹಾಗೂ ಮಠದ ವ್ಯಾಪ್ತಿಯಲ್ಲಿರುವ ದೇವಾಲಯಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಹೊರಟಿದ್ದ ರಾಜ್ಯ ಸರ್ಕಾರ ತೀವ್ರ ವಿರೋಧದ ಹಿನ್ನಲೆಯಲ್ಲಿ ಸುತ್ತೋಲೆ ವಾಪಸ್ ಪಡೆದಿದೆ.
 

ಈ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದ್ದಂತೆ ಭಾರೀ ವಿರೋಧ ವ್ಯಕ್ತವಾಗಿತ್ತು. ಚುನಾವಣೆ ಸಂದರ್ಭದಲ್ಲಿ ಇಂತಹದ್ದೊಂದು ಎಡವಟ್ಟು ಮಾಡಿಕೊಂಡು ಸರ್ಕಾರ ಹಿಂದೂ ಸಮುದಾಯದ ವಿರೋಧ ಕಟ್ಟಿಕೊಳ್ಳಲು ಹೊರಟಿತ್ತು. ಅದಕ್ಕೀಗ ಬ್ರೇಕ್ ಬಿದ್ದಿದೆ.
 
ಮೂಲಗಳ ಪ್ರಕಾರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೇರಿದಂತೆ ಕೆಲವು ಸ್ವಾಮೀಜಿಗಳು ಕಾಂಗ್ರೆಸ್ ಶಾಸಕ ಅಭಯ ಚಂದ್ರ ಜೈನ್ ಸಮ್ಮುಖದಲ್ಲೇ ಸರ್ಕಾರದ ನಿರ್ಧಾರಕ್ಕೆ ಛೀಮಾರಿ ಹಾಕಿದರು ಎನ್ನಲಾಗಿದೆ.
 
ಮಠ, ದೇವಾಲಯಗಳಿಗೆ ರಾಜಕೀಯ ಬೆರೆಸುವುದಕ್ಕೆ ನಮ್ಮ ಸಹಮತವಿಲ್ಲ ಎಂದು ಹೆಗ್ಗಡೆ ಸೇರಿದಂತೆ ಹಲವರು ಕಟುವಾಗಿ ಮಾತನಾಡಿದರು ಎನ್ನಲಾಗಿದೆ. ಅತ್ತ ಪೇಜಾವರ ಶ್ರೀಗಳಿಂದಲೂ ಇದಕ್ಕೆ ವಿರೋಧ ವ್ಯಕ್ತವಾಯಿತು. ಈ ಎಲ್ಲಾ ಹಿನ್ನಲೆಯಲ್ಲಿ ಸರ್ಕಾರ ನಿರ್ಧಾರದಿಂದ ಹಿಂದೆ ಸರಿದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಯಾವ ಪುರುಷಾರ್ಥಕ್ಕೆ ರಾಹುಲ್ ಗಾಂಧಿ ಬರುತ್ತಿದ್ದಾರೆ- ಶ್ರೀರಾಮುಲು

ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಾಡದ ಕಾಂಗ್ರೆಸ್ ಸರ್ಕಾರ ಯಾವ ಪುರುಷಾರ್ಥಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ...

news

ರಾಫೇಲ್ ಡೀಲ್ ಬಗ್ಗೆ ಪದೇ ಪದೇ ಕೆಣಕುವ ರಾಹುಲ್ ಗಾಂಧಿಗೆ ಅರುಣ್ ಜೇಟ್ಲಿ ಕೊಟ್ಟ ಸಲಹೆಯೇನು ಗೊತ್ತಾ?

ನವದೆಹಲಿ: ರಾಫೇಲ್ ಒಪ್ಪಂದದಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಉತ್ತರ ಕೊಡಿ ಎಂದು ಪದೇ ಪದೇ ಕೇಂದ್ರವನ್ನು ...

news

ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ ಎಂದ ರೆಡ್ಡಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿ ...

news

18ರಿಂದ ಕರಾವಳಿಯಲ್ಲಿ ಅಮಿತ್ ಶಾ ಮೂರು ದಿನದ ಪ್ರವಾಸ

ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಫೆಬ್ರುವರಿ ...

Widgets Magazine
Widgets Magazine