ಶರತ್ ಮಡಿವಾಳ ಶವಯಾತ್ರೆ ವೇಳೆ ಕಲ್ಲು ತೂರಾಟ..!

ಬಂಟ್ವಾಳ, ಶನಿವಾರ, 8 ಜುಲೈ 2017 (13:31 IST)

ಆರೆಸ್ಸೆಸ್ ಕಾರ್ಯಕರ್ತ ಶವಯಾತ್ರೆಯ ವೇಳೆ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಶರತ್ ಮಡಿವಾಳ ಬೆಂಬಲಿಗರು ಬಸ್, ಅಟೋ ಇತರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಅನೇಕ ವಾಹನಗಳು ಜಖಂಗೊಂಡಿವೆ. ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಲ್ಲದೇ ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
 
ಬಿ.ಸಿ.ರೋಡ್ ಬಳಿಯಿರುವ ಕೈಕಂಬ ಪ್ರದೇಶದಲ್ಲಿ ಕಲ್ಲು ತೂರಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಲ್ಲುತೂರಾಟದಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಬಂಟ್ವಾಳ ತಾಲೂಕಿನ ಕೆಂದೂರು ಗ್ರಾಮದಲ್ಲಿರುವ ಶರತ್ ಮಡಿವಾಳ ಅವರ ತೋಟದ ಮನೆಯಲ್ಲಿ ಅಂತ್ಯಸಂಸ್ಕಾರ ನಡೆಸಲಾಗುತ್ತಿದೆ ಎಂದು ಶರತ್ ಕುಟುಂಬದವರು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕರಂದ್ಲಾಜೆ, ಸಂಸದ ಕಟೀಲ್ ವಿರುದ್ಧ ಎಫ್‌ಐಆರ್ ದಾಖಲು

ಬಂಟ್ವಾಳ: ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಂಸದ ...

news

ಲಾಲು ಪುತ್ರಿ ಮಿಸಾ ಭಾರ್ತಿ ನಿವಾಸದ ಮೇಲೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ...

news

ಸಿಎಂ ಸಿದ್ದರಾಮಯ್ಯ ವಿರುದ್ಧ ಸದಾನಂದಗೌಡ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಸಿಎಂ ಆಗಿ ಕಾರ್ಯನಿರ್ವಹಿಸಲಿ. ಕಾಂಗ್ರೆಸ್ ...

news

ಆಪ್ತ ಸಚಿವರು ಬಾರದ್ದಕ್ಕೆ ಸಚಿವ ಆಂಜನೇಯ ಮೇಲೆ ಸಿಟ್ಟಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತರಾದ ಸಚಿವ ಎಸ್. ಮಹದೇವಪ್ಪ ವೇದಿಕೆ ಮೇಲೆ ಗೈರಾಗಿರುವುದಕ್ಕೆ ...

Widgets Magazine